ಶ್ರೀನಗರ: ಪ್ರವಾಸಿಗರ ಸ್ವರ್ಗ ಕಾಶ್ಮೀರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಮೈನಸ್ 3.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಮೂಲಕ ಈ ಋತುಮಾನದಲ್ಲಿ ಮೊದಲ ಬಾರಿ ತೀವ್ರ ಚಳಿ ಕಾಣಿಸಿಕೊಂಡಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸ್ಥಳೀಯ ಹವಾಮಾನ ಕೇಂದ್ರ, ದಕ್ಷಿಣ ಕಾಶ್ಮೀರ ಜಿಲ್ಲೆಗಳಾದ ಶೋಪಿಯಾನ್ನಲ್ಲಿ ಮೈನಸ್ 5.1 ಡಿಗ್ರಿ ಸೆಲ್ಸಿಯಸ್, ಪುಲ್ವಾಮಾದಲ್ಲಿ ಮೈನಸ್ 5 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಮೈನಸ್ 4 ಡಿಗ್ರಿ ಸೆಲ್ಸಿಯಸ್ ಹಾಗೂ ಗುಲ್ಮಾರ್ಗ್ನಲ್ಲಿ ಮೈನಸ್ 1.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಲಡಾಕ್ ಅನ್ನು ಸಂಪರ್ಕಿಸುವ ಜೊಜಿಲಾ ಪಾಸ್ನಲ್ಲಿ ಮೈನಸ್ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಳಿಯ ಜತೆಗೆ ಒಣ ಹವೆ ಮುಂದುವರಿದಿದ್ದು, ಮುಂದಿನ ಒಂದು ವಾರ ಇದೇ ಹವಾಗುಣ ಮುಂದುವರಿಯಲಿದೆ ಎಂದು ಹವಾಮಾನ ಕೇಂದ್ರ ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.