ಶ್ರೀನಗರ: ಭಯೋತ್ಪಾದಕ ಚಟುವಟಿಕೆ ನಿರ್ವಹಿಸುತ್ತಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲದ ವ್ಯಕ್ತಿಗೆ ಸೇರಿದ ಹಂದ್ವಾಢದಲ್ಲಿರುವ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾಢ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆ ನಡೆಸುತ್ತಿದ್ದ ಕ್ರಾಲ್ಗುಂಡ್ ಪೊಲೀಸರಿಗೆ ಪಲ್ಪೋರಾ ಗ್ರಾಮದ ನಾಸಿರ್ ಅಹ್ಮದ್ ಗನಿ ಎಂಬಾತ ಪಿಒಕೆಯಿಂದ ಕಾರ್ಯಾಚರಿಸುತ್ತಿರುವ ಮಾಹಿತಿ ಸಿಕ್ಕಿತ್ತು. ಈತ ಹಂದ್ವಾಢದಲ್ಲಿ ಭಯೋತ್ಪಾದಕ ಚಟುವಟಿಕೆಗೆ ಸಹಕಾರ ಮತ್ತು ಮಾರ್ಗದರ್ಶನ ನೀಡುವ ಕೆಲಸದಲ್ಲಿ ಸಕ್ರಿಯನಾಗಿದ್ದ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.

ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕಾನೂನು ಅವಕಾಶಗಳಡಿ ಶಂಕಿತ ವ್ಯಕ್ತಿಯ ಭೂಮಿಯನ್ನು ಜಪ್ತಿ ಮಾಡಿದ್ದಾರೆ. ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು, ಉಗ್ರರಿಗೆ ಸಿಗುತ್ತಿರುವ ಸಹಕಾರ ತಪ್ಪಿಸಿ, ಶಾಂತಿ ಸುವ್ಯವಸ್ಥೆ ಬಲಪಡಿಸುವ ಕ್ರಮ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.