ನವದೆಹಲಿ: ಜೆಡಿ(ಯು) ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಕೆ.ಸಿ. ತ್ಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಮಿತ್ರ ಪಕ್ಷ ಬಿಜೆಪಿ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಅವರು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ.
ಈ ನಡುವೆ ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಆದಾಗ್ಯೂ, ತ್ಯಾಗಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.