ನವದೆಹಲಿ (ಪಿಟಿಐ): ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರನ್ನು 2026–27ರ ಸಾಲಿಗೆ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ (ಪಿಎಸಿ) ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಲಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಬಿಜೆಪಿ ನಾಯಕ ಬೈಜಯಂತ್ ಪಾಂಡಾ ಅವರನ್ನು ಸಾರ್ವಜನಿಕ ಉದ್ಯಮಗಳ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಬಿಜೆಪಿಯ ಫಗ್ಗನ್ ಸಿಂಗ್ ಕುಲಸ್ತೆ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವರು. ಅಧ್ಯಕ್ಷರ ಅಧಿಕಾರದ ಅವಧಿ 2026ರ ಮೇ 1ರಿಂದ 2027ರ ಏ.30ರ ವರೆಗೆ ಇರಲಿದೆ ಎಂದು ಅಧಿಸೂಚನೆ ತಿಳಿಸಿದೆ.

ಡಿಎಂಕೆಯ ಟಿ.ಆರ್.ಬಾಲು, ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ, ಬಿಜೆಪಿಯ ರವಿಶಂಕರ್ ಪ್ರಸಾದ್, ತೇಜಸ್ವಿ ಸೂರ್ಯ, ಅನುರಾಗ್ ಠಾಕೂರ್, ಅಪರಾಜಿತಾ ಸಾರಂಗಿ ಸೇರಿ ಲೋಕಸಭೆಯ 15 ಸದಸ್ಯರು ಸಾರ್ವಜನಿಕ ಲೆಕ್ಕಪತ್ರ ಸಮಿತಿಯಲ್ಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-1383577274

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.