ರುದ್ರಪ್ರಯಾಗ (ಉತ್ತರಾಖಂಡ): ಕೇದಾರನಾಥ ದೇಗುಲದ ಚಾರಣ ಮಾರ್ಗದಲ್ಲಿರುವ ಸೋನ್ಪ್ರಯಾಗ ಬಳಿಯ ಮುಂಕಟಿಯಾದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಕಟಿಯಾ ಪ್ರದೇಶದಲ್ಲಿ ಮಣ್ಣು ಮತ್ತು ಕಲ್ಲುಗಳಿಂದ ರಸ್ತೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಸ್ಥಳೀಯ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಗೌರಿಕುಂಡ–ಕೇದಾರನಾಥ ಚಾರಣ ಮಾರ್ಗದಲ್ಲಿ ಯಾತ್ರಿಗಳು ಸಿಲುಕಿಕೊಂಡಿದ್ದಾರೆ. ಈ ಮಾರ್ಗದ ಸುಮಾರು 20–25 ಮೀಟರ್ ಉದ್ದದ ರಸ್ತೆ ಮಾರ್ಗವು ಭೂಕುಸಿತದಿಂದ ಹಾನಿಗೊಳಗಾಗಿದೆ. ಸಂಚಾರ ರದ್ದುಗೊಂಡಿದೆ. ಯಾತ್ರಿಕರನ್ನು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣೆ ಮಾಡಿದ್ದು, ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ.

ಚಾರ್ ಧಾಮ್ ಯಾತ್ರೆಯ ನಾಲ್ಕು ದೇಗುಲಗಳಲ್ಲಿ ಮೂರನೇ ದೇವಾಲಯವಾಗಿರುವ ಕೇದಾರನಾಥವು ಪ್ರಮುಖವಾದದ್ದು. ಅಪಾರ ಸಂಖ್ಯೆಯ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.