ಪಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿವಾದದ ಕಾರಣದಿಂದ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ‘ಆಯ್ಕೆಯನ್ನು ಮುಕ್ತವಾಗಿಟ್ಟುಕೊಂಡಿದ್ದೇವೆ’ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಗುರುವಾರ ಹೇಳಿದ್ದಾರೆ.

ವಿಧಾನಮಂಡಲದ ಮುಂಗಾರು ಅಧಿವೇಶನದ ಕೊನೆಯ ದಿನದ ಕಲಾಪದ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಆಯ್ಕೆಯನ್ನು ಮುಕ್ತವಾಗಿರಿಸಿದ್ದೇವೆ. ಮೈತ್ರಿಕೂಟದ ಪಾಲುದಾರ ಪಕ್ಷಗಳೊಂದಿಗೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವುದು ಮೋಸ ಅಲ್ಲದೆ, ಬೇರೇನೂ ಅಲ್ಲ’ ಎಂದು ಹೇಳಿದರು.

‘ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ವೇಳೆ ಮತದಾರರ ಪರವಾಗಿ ಮತಗಟ್ಟೆ ಅಧಿಕಾರಿಗಳೇ ತಮ್ಮ ಸಹಿ ಮತ್ತು ಹೆಬ್ಬೆರಳಿನ ಗುರುತು ಹಾಕುತ್ತಿದ್ದಾರೆ. ಖಾಲಿ ಅರ್ಜಿ ನಮೂನೆಗಳನ್ನು ರದ್ದಿ ಕಾಗದದಂತೆ ಬಳಸಲಾಗುತ್ತಿದೆ. ಈ ಲೋಪಗಳನ್ನು ಬಹಿರಂಗಪಡಿಸುವ ಪತ್ರಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತಿದೆ. ಚುನಾವಣಾ ಆಯೋಗವು ಆಡಳಿತ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿರುವ ಕಾರಣ ಸರ್ಕಾರ ಸುಮ್ಮನೆ ಕುಳಿತುಕೊಂಡಿದೆ’ ಎಂದು ಆರೋಪಿಸಿದರು.

ವಿಪಕ್ಷ ಸದಸ್ಯರಿಂದ ಪ್ರತಿಭಟನೆ: ಬಿಹಾರ ವಿಧಾನಸಭೆಯಲ್ಲಿ ಮುಂಗಾರು ಅಧಿವೇಶನದ ಕೊನೆಯ ದಿನ ಸ್ಪೀಕರ್ ನಂದಕಿಶೋರ್ ಯಾದವ್ ಅವರು ವಿರೋಧ ಪಕ್ಷಗಳ ಸದಸ್ಯರಿಗೆ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ತಮ್ಮ ಆಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಿದರು.

ಎಸ್ಐಆರ್ ಅನೇಕ ಅರ್ಹ ಮತದಾರರನ್ನು ಮತದಾನದ ಅವಕಾಶದಿಂದ ವಂಚಿತರನ್ನಾಗಿ ಮಾಡಬಹುದು ಎಂದು ವಿಪಕ್ಷಗಳ ಸದಸ್ಯರು ಕಳವಳ ವ್ಯಕ್ತಪಡಿಸಿದರು. ಗುರುವಾರ ಪ್ರತಿಭಟನೆಯ ಸಂಕೇತವಾಗಿ ಹಲವು ಸದಸ್ಯರು ಕಪ್ಪು ಬಟ್ಟೆ ಧರಿಸಿ ಕಲಾಪದಲ್ಲಿ ಭಾಗವಹಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಯಾವನೇ ಒಬ್ಬ ನೈಜ ಮತದಾರನ ಹೆಸರು ಕೈಬಿಡಬಾರದೆಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ
ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕ

ಮೊದಲು ಬಿಹಾರದಲ್ಲಿ ಮತ್ತು ಆ ಬಳಿಕ ಇಡೀ ದೇಶದಲ್ಲಿ ಅನರ್ಹರಿಗೆ ಮತ ಚಲಾಯಿಸಲು ಅವಕಾಶ ನೀಡುವುದು ಸಂವಿಧಾನಕ್ಕೆ ವಿರುದ್ಧವಾಗಿದೆ
ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತ

‘ಮೃತರ ಹೆಸರು ಉಳಿಸಲು ಸಾಧ್ಯವಿಲ್ಲ’

ಮೃತಪಟ್ಟವರು ಮತ್ತು ಶಾಶ್ವತವಾಗಿ ವಲಸೆ ಬಂದವರು ಅಥವಾ ಹಲವು ಕಡೆಗಳಲ್ಲಿ ಮತದಾರರಾಗಿ ಹೆಸರು ನೋಂದಾಯಿಸಿದವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಲು ಸಾಧ್ಯವೇ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಹಾರದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸಿರುವ ಸಂದರ್ಭದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.

‘ಚುನಾವಣಾ ಆಯೋಗವು ಪಾರದರ್ಶಕ ಪ್ರಕ್ರಿಯೆಯ ಮೂಲಕ ಸಿದ್ಧಪಡಿಸುವ ಮತದಾರರ ಪಟ್ಟಿ ನ್ಯಾಯಯುತ ಚುನಾವಣೆಗಳು ಮತ್ತು ಬಲವಾದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯವಲ್ಲವೇ?’ ಎಂದು ಅವರು ಕೇಳಿದ್ದಾರೆ. ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಭೇಟಿ ಸಂದರ್ಭ ಚುನಾವಣಾ ಅಧಿಕಾರಿಗಳು ಇಲ್ಲಿಯವರೆಗೆ ವಿಳಾಸದಲ್ಲಿ ಲಭ್ಯವಿಲ್ಲದ 52 ಲಕ್ಷ ಮತದಾರರನ್ನು ಪತ್ತೆ ಹಚ್ಚಿದ್ದಾರೆ. ಪಟ್ಟಿಯಲ್ಲಿ ಇದ್ದವರಲ್ಲಿ 18 ಲಕ್ಷ ಮತದಾರರು ಮೃತಪಟ್ಟಿರುವ ಅಂಶ ಬಯಲಾಗಿದೆ.

Cut-off box - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.