ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್‌ ಬಂಧನ | ಭ್ರಷ್ಟಾಚಾರದ ವಿರುದ್ಧ ಹೋರಾಡುವ ಪ್ರತಿಜ್ಞೆ ಮಾಡಿದ ಬಿಜೆಪಿ

Published 23 ಮಾರ್ಚ್ 2024, 10:53 IST
Last Updated 23 ಮಾರ್ಚ್ 2024, 10:53 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನದ ಬೆನ್ನಲ್ಲೇ ದೆಹಲಿ ಬಿಜೆಪಿ ನಾಯಕರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಇಂದು( ಶನಿವಾರ) ಪುಷ್ಪ ನಮನ ಸಲ್ಲಿಸಿ, ಭ್ರಷ್ಟಾಚಾರದ ವಿರುದ್ಧ ಹೋರಾಡುವ ಪ್ರತಿಜ್ಞೆ ಮಾಡಿದರು.

ಈ ವೇಳೆ ರಾಜ್‌ಘಾಟ್‌ನಲ್ಲಿ ಬಿಜೆಪಿ ನಾಯಕರು ‘ರಘುಪತಿ ರಾಘವ ರಾಜ ರಾಮ‘ ಎಂದು ಹಾಡಿದ್ದಾರೆ.

‘ನಾವು ಬಿಜೆಪಿ ಕಾರ್ಯಕರ್ತರು, ನಾವು ಯಾವಾಗಲೂ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮೊದಲು ಧ್ವನಿ ಎತ್ತುತ್ತೇವೆ. ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುತ್ತೇವೆ’ ಎಂದು ಪ್ರತಿಜ್ಞೆ ಕೈಗೊಂಡರು.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 28ರವರೆಗೆ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿಗೆ ಒಪ್ಪಿಸಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT