ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆ.17) ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ಮುಂಬರುವ ಚುನಾವಣೆಯಲ್ಲಿ ಜನರು ‘ನಾವು ಪ್ರಾಮಾಣಿಕರು’ ಎಂದು ಹೇಳಿದಾಗ ಮತ್ತೆ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿಯಾಗಿ ಮನೀಶ್ ಸಿಸೋಡಿಯಾ ಅಧಿಕಾರ ಸ್ವೀಕರಿಸುತ್ತಾರೆ ಎಂದು ಎಎಪಿ ತಿಳಿಸಿದೆ.
.ಪರೀಕ್ಷಾರ್ಥಿಯ ಖಾಸಗಿ ಭಾಗಗಳನ್ನು ತಪಾಸಣೆ ನಡೆಸಿದ ಕಾನ್ಸ್ಟೆಬಲ್: ತನಿಖೆಗೆ ಆದೇಶ.ಸದ್ಯ ಇರುವ ಸಂವಿಧಾನದಲ್ಲಿ ಒಂದು ದೇಶ, ಒಂದು ಚುನಾವಣೆ ಅಸಾಧ್ಯ: ಚಿದಂಬರಂ.
‘ಜನರು ಪ್ರಾಮಾಣಿಕತೆಯ ಪ್ರಮಾಣ ಪತ್ರವನ್ನು ನೀಡಿದಾಗ ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುತ್ತೇನೆ‘. ಇನ್ನೆರಡು ದಿನದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಭಾನುವಾರ ಕೇಜ್ರಿವಾಲ್ ಹೇಳಿದ್ದರು.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಎಎಪಿ ಶಾಸಕರ ಸಭೆಯನ್ನು ಇನ್ನು ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು.
.Manipur Violence | ಮಣಿಪುರ ಸಚಿವರ ನಿವಾಸದ ಮೇಲೆ ಗ್ರೆನೇಡ್ ದಾಳಿ.ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ಬಹುಮಾನ:ಶಿವಸೇನಾ ಶಾಸಕ ಗಾಯಕ್ವಾಡ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.