ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಅಯೋಧ್ಯೆಗೆ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್ ಭೇಟಿ: ರಾಮನಿಗೆ ವಿಶೇಷ ಪೂಜೆ

Published 11 ಫೆಬ್ರುವರಿ 2024, 10:18 IST
Last Updated 11 ಫೆಬ್ರುವರಿ 2024, 10:18 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೋಮವಾರ (ನಾಳೆ) ಅಯೋಧ್ಯೆಗೆ ಭೇಟಿ ನೀಡಿಲಿದ್ದು, ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ.

ಉಭಯ ನಾಯಕರಿಗೆ ಜನವರಿ 22ರಂದು ನಡೆದ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಆದರೆ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದರು.

ಕೇಜ್ರಿವಾಲ್ ಹಾಗೂ ಮಾನ್ ನಾಳೆ ಅಯೋಧ್ಯೆಗೆ ತೆರಳಲಿದ್ದಾರೆ. ಅವರ ಕುಟುಂಬ ಸದಸ್ಯರು ಕೂಡ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT