ನವದೆಹಲಿ: ವಿಧಾನಸಭಾ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಡಿಎಂಕೆ ಪಕ್ಷಗಳು ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರಿಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್ ‘ಭರ್ಜರಿ ಗೆಲುವು ಸಾಧಿಸಿರುವ ನಿಮಗೆ ಅಭಿನಂದನೆಗಳು. ಎಂಥ ಅದ್ಭುತ ಹೋರಾಟ !. ನಿಮ್ಮ ಪಕ್ಷವನ್ನು ಗೆಲ್ಲಿಸಿದ ಪಶ್ಚಿಮ ಬಂಗಾಳದ 292 ಕ್ಷೇತ್ರಗಳ ಮತದಾರರಿಗೂ ಅಭಿನಂದೆನಗಳು‘ ಎಂದು ಹೇಳಿದ್ದಾರೆ.

‘ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ಸ್ಟಾಲಿನ್ ನಿಮಗೆ ಅಭಿನಂದನೆಗಳು. ನಿಮ್ಮ ಅಧಿಕಾರಾವಧಿ ಯಶಸ್ವಿಯಾಗಿ ಸಾಗಲಿ. ತಮಿಳುನಾಡಿನ ಜನರ ಆಕಾಂಕ್ಷೆಗಳನ್ನು ಈಡೇರಿಸುವಂತಾಗಲಿ ಎಂದು ನಾನು ಬಯಸುತ್ತೇನೆ‘ ಎಂದು ಅವರು ಮತ್ತೊಂದು ಟ್ವೀಟ್‌ನಲ್ಲಿ ಶುಭಕೋರಿದ್ದಾರೆ.

ಈಗಿನ ಮತಎಣಿಕೆಯ ಟ್ರೆಂಡ್ ಪ್ರಕಾರ ಪಶ್ಚಿಮ ಬಂಗಾಳದ 292 ಕ್ಷೇತ್ರಗಳ ಪೈಕಿ ಮತ ಎಣಿಕೆ ನಡೆಯುತ್ತಿರುವ 284 ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳು 202 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಗಳು 77 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಟಿಎಂಸಿಯ ಇದೇ ಗೆಲುವಿನ ಓಟವನ್ನು ಮುಂದುವರಿದರೆ, ಪಶ್ಚಿಮ ಬಂಗಾಳದಲ್ಲಿ ಮೂರನೇ ಅವಧಿಗೂ ಟಿಎಂಸಿ ನೇತೃತ್ವದ ಸರ್ಕಾರ ಮುಂದುವರಿಯುವ ಎಲ್ಲ ಸಾಧ್ಯತೆಗಳಿವೆ.

ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಅಭ್ಯರ್ಥಿಗಳು 145 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 234 ಸದಸ್ಯರ ವಿಧಾನಸಭೆಯಲ್ಲಿ ಸರಳ ಬಹುಮತ ಡಿಎಂಕೆಗೆ ಲಭ್ಯವಾಗುವ ಸಾಧ್ಯತೆ ಇದೆ. ಡಿಎಂಕೆ ಜತೆಗೆ ಮಿತ್ರ ಪಕ್ಷಗಳ 19 ರಲ್ಲಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಹೀಗಾಗಿ ಡಿಎಂಕೆ ಮೈತ್ರಿಕೂಟಕ್ಕೆ ಆರಾಮದಾಯಕ ಮುನ್ನಡೆ ದೊರೆಯುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.