ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಡಿ ಸಮನ್ಸ್ 'ರಾಜಕೀಯ ಪ್ರೇರಿತ': ವಿಪಶ್ಶನ ಧ್ಯಾನ ಶಿಬಿರಕ್ಕೆ ತೆರಳಿದ ಕೇಜ್ರಿವಾಲ್

Published 21 ಡಿಸೆಂಬರ್ 2023, 4:59 IST
Last Updated 21 ಡಿಸೆಂಬರ್ 2023, 4:59 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದ (ಇ.ಡಿ) ಸಮನ್ಸ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉತ್ತರಿಸಿದ್ದು, ಇದನ್ನು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿರುವುದಾಗಿ ಆಮ್ ಅದ್ಮಿ ಪಕ್ಷದ (ಎಎಪಿ) ಮೂಲಗಳು ತಿಳಿಸಿವೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಡಿಸೆಂಬರ್ 21ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸಮನ್ಸ್ ಜಾರಿ ಮಾಡಿತ್ತು.

ತಮ್ಮ ವಿರುದ್ಧ ಜಾರಿ ಮಾಡಿರುವ ಸಮನ್ಸ್ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಕಾನೂನಿಗೆ ವಿರುದ್ಧವಾಗಿದೆ. ಜೀವನವನ್ನು ಅತ್ಯಂತ ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ನಡೆಸುತ್ತಿದ್ದು, ಮರೆಮಾಚಲು ಏನೂ ಇಲ್ಲ. ಕಾನೂನಿನ ಪ್ರಕಾರ ಕಳುಹಿಸಿದ ಸಮನ್ಸ್ ಸ್ವೀಕರಿಸಲು ಸಿದ್ಧವಿರುವುದಾಗಿ ಅವರು ತಮ್ಮ ಪ್ರತಿಕ್ರಿಯೆಯಲ್ಲಿ ಹೇಳಿರುವುದಾಗಿ ಎಎಪಿ ತಿಳಿಸಿದೆ.

ಕೇಜ್ರಿವಾಲ್ ಡಿಸೆಂಬರ್ 19ರಿಂದ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ತೆರಳಿರುವುದಾಗಿ ಮೂಲಗಳು ತಿಳಿಸಿವೆ. ಆದರೆ ವಿಪಶ್ಶನ ಧ್ಯಾನ ನಡೆಸುವ ಸ್ಥಳವನ್ನು ಬಹಿರಂಗಪಡಿಸಿಲ್ಲ.

ಈ ಹಿಂದೆ ನವೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಕೇಜ್ರಿವಾಲ್ ಹಾಜರಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT