ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಂಗಳವಾರ ಕೋವಿಡ್–19 ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಿಗೆ ಸೋಂಕು ಇಲ್ಲ ಎಂದು ದೃಢಪಟ್ಟಿದೆ.

ಕೇಜ್ರಿವಾಲ್ ಅವರಿಗೆ ಭಾನುವಾರ ಮಧ್ಯಾಹ್ನ ಸ್ವಲ್ಪ ಜ್ವರ ಹಾಗೂ ಗಂಟಲು ಕೆರತ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಪ್ರತ್ಯೇಕ ವಾಸದಲ್ಲಿದ್ದರು.ಅವರಿಗೆ ಮಧುಮೇಹ ಇದೆ.

ಭಾನುವಾರ ಸಂಪುಟ ಸಭೆ ನಡೆಸಿದ ಬಳಿಕ ತಮ್ಮ ಎಲ್ಲ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಅವರು ರದ್ದುಗೊಳಿಸಿ ಪ್ರತ್ಯೇಕವಾಗಿ ಇದ್ದಾರೆ.ಕಳೆದ ಎರಡು ತಿಂಗಳಿನಿಂದ ಅವರು ಬಹುತೇಕ ಸಭೆಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕನ ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚಿಸಲು ಲೆಫ್ಟಿನೆಂಟ್ ಗವರ್ನರ್ ಅವರುಮಂಗಳವಾರ ಮಧ್ಯಾಹ್ನ 3 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.