ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ: ಕ್ಷಮೆ ಕೇಳಲು ಕೇಜ್ರಿವಾಲ್‌ಗೆ ಸೀತಾರಾಮನ್ ಆಗ್ರಹ

ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪ
Published 17 ಮೇ 2024, 7:43 IST
Last Updated 17 ಮೇ 2024, 7:43 IST
ಅಕ್ಷರ ಗಾತ್ರ

ನವದೆಹಲಿ: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸ್ವಾತಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಇದುವರೆಗೆ ಕೇಜ್ರಿವಾಲ್ ಅವರು ಬಾಯಿ ತೆರೆದಿಲ್ಲ. ಈ ವಿಷಯದಲ್ಲಿ ಅವರು ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಎಎಪಿ ಮಹಿಳಾ ವಿರೋಧಿ ಪಕ್ಷ ಎಂಬುದು ಇದರಿಂದಲೇ ಸಾಬೀತಾಗುತ್ತದೆ ಎಂದು ಅವರು ಹರಿಹಾಯ್ದಿದ್ದಾರೆ.

ಮಾಲಿವಾಲ್ ಅವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಎಪಿ ನಾಯಕರು ಹೇಳುತ್ತಾರೆ. ಆರೋಪಿ ಬಿಭವ್ ಕುಮಾರ್ ಅವರು ಕೇಜ್ರಿವಾಲ್ ಜೊತೆ ಕಾಣಿಸಿಕೊಳ್ಳುತ್ತಾರೆ ಎಂದು ದೂರಿದ್ದಾರೆ.

ಈ ವಿಷಯದಲ್ಲಿ ಕೇಜ್ರಿವಾಲ್ ಒಂಚೂರು ಮಾತನಾಡದಿರುವುದು ನನಗೆ ತೀವ್ರ ಅಚ್ಚರಿ ತರಿಸಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

ಮಾಲಿವಾಲ್‌ ಅವರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT