ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಜಲ ಮಂಡಳಿ ಹಗರಣ: ಇ.ಡಿ ವಿಚಾರಣೆಗೆ ಹಾಜರಾಗದ ಅರವಿಂದ ಕೇಜ್ರಿವಾಲ್

Published 18 ಮಾರ್ಚ್ 2024, 5:06 IST
Last Updated 18 ಮಾರ್ಚ್ 2024, 5:06 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್‌ಗೆ ಸೊಪ್ಪು ಹಾಕದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರಾದರು.

ಸಮನ್ಸ್ ಅನ್ನು ಕಾನೂನುಬಾಹಿರ ಎಂದು ಕರೆದಿರುವ ಆಮ್ ಆದ್ಮಿ ಪಕ್ಷ, ಕೇಂದ್ರದ ಬಿಜೆಪಿ ಸರ್ಕಾರ ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.

ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾ. 18ರಂದು ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಭಾನುವಾರ ನೋಟಿಸ್ ಜಾರಿ ಮಾಡಿತ್ತು. ಇದು ಕೇಜ್ರಿವಾಲ್ ವಿರುದ್ಧ ದಾಖಲಾಗಿರುವ ಎರಡನೇ ಹಣ ಅಕ್ರಮ ವರ್ಗಾವಣೆ ಪ್ರಕರಣವಾಗಿದೆ.

ದೆಹಲಿ ಅಬಕಾರಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಕೇಜ್ರಿವಾಲ್‌ಗೆ ಇ.ಡಿ. ಇದುವರೆಗೆ 8 ಸಮನ್ಸ್‌ ಜಾರಿ ಮಾಡಿದೆ. ಸಮನ್ಸ್‌ಗಳನ್ನು ಕಾನೂನು ಬಾಹಿರ ಎಂದು ಹೇಳಿ 8 ಬಾರಿಯೂ ವಿಚಾರಣೆಗೆ ಗೈರಾಗಿದ್ದರು.

ಇದೇ ಪ್ರಕರಣದಲ್ಲಿ 9ನೇ ಸಮನ್ಸ್‌ ಜಾರಿ ಮಾಡಿದ್ದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದು, ಮಾರ್ಚ್ 21ರಂದು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT