ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒತ್ತಡದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಕೇಜ್ರಿವಾಲ್: ಸಚ್‌ದೇವ

Published : 16 ಸೆಪ್ಟೆಂಬರ್ 2024, 13:13 IST
Last Updated : 16 ಸೆಪ್ಟೆಂಬರ್ 2024, 13:13 IST
ಫಾಲೋ ಮಾಡಿ
Comments

ನವದೆಹಲಿ: ಅತಿಯಾದ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಅರವಿಂದ ಕೇಜ್ರಿವಾಲ್‌ ಪ್ರೇರಿತರಾಗಿದ್ದು, ಯಾವುದೇ ರಾಜಕೀಯ ನೀತಿಯನ್ನು ಆಧರಿಸಿಲ್ಲ ಎಂದು ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಕೇಜ್ರಿವಾಲ್ ಅವರ ಆಡಳಿತದಲ್ಲಿ ದೆಹಲಿ ಸರ್ಕಾರದ ಯಾವುದೇ ಇಲಾಖೆಗಳು ಭ್ರಷ್ಟಾಚಾರದಿಂದ ಮುಕ್ತವಾಗಿಲ್ಲ ಎಂದು ಸಚ್‌ದೇವ ಆರೋಪಿಸಿದ್ದಾರೆ.

ಅರವಿಂದ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದ ಸಚ್‌ದೇವ, ‘ಅತಿಯಾದ ಒತ್ತಡದಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಅರವಿಂದ ಕೇಜ್ರಿವಾಲ್‌ ಪ್ರೇರಿತರಾಗಿದ್ದು, ಯಾವುದೇ ರಾಜಕೀಯ ನೀತಿಯನ್ನು ಆಧರಿಸಿಲ್ಲ. ಅವರು ತಮ್ಮ ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ, ಯಾವುದೇ ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ. ಹೀಗಿರುವಾಗ ರಾಜೀನಾಮೆ ನೀಡದೆ ಅವರಿಗೆ ಬೇರೆ ಆಯ್ಕೆ ಏನಿದೆ?’ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನಿನ ಮೂಲಕ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು 48 ಗಂಟೆಗಳೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಭಾನುವಾರ ಘೋಷಿಸಿದ್ದಾರೆ.

‘ನಾವು ಪ್ರಾಮಾಣಿಕರು ಎಂದು ಜನರು ಹೇಳಿದಾಗ ಮಾತ್ರ ನಾನು ಮುಖ್ಯಮಂತ್ರಿಯಾಗಿ, ಮನೀಶ್‌ ಸಿಸೋಡಿಯಾ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದೇವೆ’ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT