ತಿರುವಲ್ಲಾ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ಮತ್ತು ಬಿಜೆಪಿ ನಡುವೆ ಒಪ್ಪಂದ ನಡೆದಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಳ್ಳಿಹಾಕಿದ್ದಾರೆ.

‘2016ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆಯೇ ಒಳ ಒಪ್ಪಂದ ನಡೆದಿತ್ತು. ಇದೇ ಕಾರಣಕ್ಕೆ ನೇಮಂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಆರೋಪಿಸಿದ್ದಾರೆ.

‘ಬಿಜೆಪಿ ಜೊತೆ ರಹಸ್ಯ ಸಂಬಂಧ ಹೊಂದಿರುವ ಇತಿಹಾಸ ಕಾಂಗ್ರೆಸ್ಗೆ ಇದೆ. ನೇಮಂ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಗಳು ಗಣನೀಯವಾಗಿ ಕುಸಿದವು. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ತನ್ನ ಏಕೈಕ ಕ್ಷೇತ್ರದಲ್ಲಿ ಬಿಜೆಪಿ ಜಯ ಸಾಧಿಸಿತು‘ ಎಂದು ಆರೋಪಿಸಿದ್ದಾರೆ.

‘ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಎಡಪಕ್ಷಗಳು ಅದರಲ್ಲೂ ಮುಖ್ಯವಾಗಿ ಸಿಪಿಎಂ ಎಂದಿಗೂ ರಾಜಿ ಮಾಡಿಕೊಳ್ಳದ ನಿಲುವನ್ನು ತಳೆದಿವೆ. ಇದನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ. ಆದರೆ, ಈ ಹಿಂದೆ ಕಾಂಗ್ರೆಸ್ ಕೂಡ ಆರ್ಎಸ್ಎಸ್ ಜತೆ ಸಂಪರ್ಕ ಸಾಧಿಸಲು ಪ್ರಯತ್ನಿಸಿತ್ತು’ ಎಂದಿದ್ದಾರೆ.

ದೆಹಲಿಯ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿದ ಪಿಣರಾಯಿ, ‘ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಅವರ ಬಂಧನವಾದಾಗ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಆಡಳಿತ ಪಕ್ಷದ ವಿರುದ್ಧ ಒಗ್ಗೂಡುವ ಬದಲು ಎಎಪಿಯನ್ನು ವಿರೋಧಿಸುವ ಕಾರ್ಯದಲ್ಲಿ ಕಾಂಗ್ರೆಸ್ ತೊಡಗಿತ್ತು’ ಎಂದು ಆರೋಪಿಸಿದ್ದಾರೆ.

‘ಎಲ್ಡಿಎಫ್ಗೆ ಮತ್ತೊಮ್ಮೆ ಜನಾದೇಶ ನೀಡಿ’

‘ರಾಜ್ಯದ ಅಭಿವೃದ್ಧಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಏಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಲ್ಡಿಎಫ್ಗೆ ಮತ್ತೊಮ್ಮೆ ಜನಾದೇಶ ನೀಡಬೇಕು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ‘ಬಲಪಂಥೀಯ ಶಕ್ತಿಗಳು ಸುಳ್ಳುಗಳನ್ನು ಹರಡುವ ಮತ್ತು ಕೋಮುವಾದದ ಆಟವಾಡುವ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿವೆ’ ಎಂದು ಆರೋಪಿಸಿದ್ದಾರೆ. ‘ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿವೆ. ಆದರೆ ಕಳೆದ 10 ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಮಾದರಿಯಾಗಿರುವ ಜನಪರವಾದ ವ್ಯವಸ್ಥೆಯನ್ನು ಕೇರಳ ಸರ್ಕಾರ ಜಾರಿಗೊಳಿಸಿದೆ. ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸುವ ಮೂಲಕ ಮೇಲ್ಪಕ್ತಿ ಹಾಕಿಕೊಟ್ಟಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.