ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಯಕ್ಷಮತೆ ಸೂಚ್ಯಂಕ: ಕೇರಳ ಅಗ್ರ, ಉ.ಪ್ರದೇಶಕ್ಕೆ ಕೊನೆಯ ಸ್ಥಾನ

Last Updated 27 ಡಿಸೆಂಬರ್ 2021, 11:01 IST
ಅಕ್ಷರ ಗಾತ್ರ

ನವದೆಹಲಿ: ನೀತಿ ಆಯೋಗ ಬಿಡುಗಡೆ ಮಾಡಿರುವ ನಾಲ್ಕನೇ ಆರೋಗ್ಯ ಕಾರ್ಯಕ್ಷಮತೆಯ ಸೂಚ್ಯಂಕದ ಪ್ರಕಾರ, ದೊಡ್ಡ ರಾಜ್ಯಗಳಲ್ಲಿ ಕೇರಳ ಮಗದೊಮ್ಮೆ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ.

2019-20ನೇ ವರ್ಷವನ್ನು ಆಧರಿಸಿ ನಾಲ್ಕನೇ ಸುತ್ತಿನ ಆರೋಗ್ಯ ಕಾರ್ಯಕ್ಷಮತೆಯ ಸೂಚ್ಯಂಕವನ್ನು ಬಿಡುಗಡೆ ಮಾಡಲಾಗಿದೆ. ಆರೋಗ್ಯದ ಮಾನದಂಡಗಳಲ್ಲಿ ತಮಿಳುನಾಡು ಮತ್ತು ತೆಲಂಗಾಣ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದಿವೆ.

ಏತನ್ಮಧ್ಯೆ ಮೂಲ ವರ್ಷದಿಂದ (2018-2020) ಉಲ್ಲೇಖ ವರ್ಷಕ್ಕೆ (2019-20) ಅತ್ಯಧಿಕ ಬದಲಾವಣೆ ದಾಖಲಿಸುವ ಮೂಲಕ ಹೆಚ್ಚುತ್ತಿರುವ ಕಾರ್ಯಕ್ಷಮತೆಯ ವಿಷಯದಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಿದೆ.

ಸಣ್ಣ ರಾಜ್ಯಗಳ ಪೈಕಿ ಮಿಜೋರಾಂ ಒಟ್ಟಾರೆ ಆರೋಗ್ಯ ಹಾಗೂ ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅಗ್ರಸ್ಥಾನ ಪಡೆದಿದೆ.

ಕೇಂದ್ರಾಡಳಿತ ಪ್ರದೇಶಗಳ ಪೈಕಿ ದೆಹಲಿ ಹಾಗೂ ಜಮ್ಮು ಮತ್ತು ಕಾಶ್ಮೀರ ಒಟ್ಟಾರೆ ಕಾರ್ಯಕ್ಷಮತೆಯ ಅಂಶದಲ್ಲಿ ಕಳಪೆ ಸಾಧನೆಗೈದಿದೆ. ಆದರೆ ಹೆಚ್ಚುತ್ತಿರುವ ಕಾರ್ಯಕ್ಷಮತೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ವಿಶ್ವಬ್ಯಾಂಕ್‌ನ ತಾಂತ್ರಿಕ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ವರದಿಯನ್ನು ಸಿದ್ಧಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT