ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ ಕಳಮಶ್ಶೇರಿ ಸರಣಿ ಬಾಂಬ್ ಸ್ಫೋಟ: ಸಿಎಂ ಪಿಣರಾಯಿ ಅವರಿಂದ ಸರ್ವಪಕ್ಷ ಸಭೆ

ಕೇರಳದ ಎರ್ನಾಕುಳಂ ಬಳಿ ಕಳಮಶ್ಶೇರಿ ಎಂಬಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣ
Published 30 ಅಕ್ಟೋಬರ್ 2023, 6:20 IST
Last Updated 30 ಅಕ್ಟೋಬರ್ 2023, 6:20 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳದ ಎರ್ನಾಕುಳಂ ಬಳಿ ಕಳಮಶ್ಶೇರಿ ಎಂಬಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಬೆಳಿಗ್ಗೆ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ.

ಸಚಿವಾಲಯದ ಸಭಾಂಗಣದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅನೇಕ ಪಕ್ಷಗಳ ಮುಖಂಡರು ಭಾಗಿಯಾಗಿದ್ದಾರೆಂದು ತಿಳಿದು ಬಂದಿದೆ.

ಕ್ರೈಸ್ತ ಸಮುದಾಯದವರು ಕಳಮಶ್ಶೇರಿ ಕನ್ವನ್ಷನ್ ಸೆಂಟರ್‌ನಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿದ್ದಲ್ಲಿ ಸರಣಿ ಬಾಂಬ್ ಸ್ಫೋಟಗೊಂಡ ಪರಿಣಾಮವಾಗಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಮಹಿಳೆಯರು ಹಾಗೂ ಒಬ್ಬ ಬಾಲಕಿ ಸತ್ತಿದ್ದಾರೆ. ಈ ಬಾಂಬ್ ಸ್ಪೋಟಕ್ಕೆ ಅಧಿಕೃತ ಕಾರಣ ಏನು? ಹೊಣೆ ಯಾರದ್ದು ಎಂಬುದನ್ನು ಕೇರಳ ಪೊಲೀಸರು ಇದುವರೆಗೆ ಬಹಿರಂಗಪಡಿಸಿಲ್ಲ.

ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಎರ್ನಾಕುಳಂ ಜಿಲ್ಲೆಯ ಮಲಯತ್ತೂರಿನ ಲಿಬಿನಾ ಎನ್ನುವ 12 ವರ್ಷದ ಬಾಲಕಿ ತಡರಾತ್ರಿ 12.05 ರ ಸುಮಾರು ಕಳಮಶ್ಶೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾದರು. ಅವರಿಗೆ ಶೇ 95 ರಷ್ಟು ಸುಟ್ಟ ಗಾಯಗಳಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಕಲಮಶೇರಿಯ ‘ಯಹೋವನ ಸಾಕ್ಷಿಗಳು’ ಪಂಥದ ಕಾರ್ಯಕ್ರಮ ನಡೆಯುತ್ತಿದ್ದ ಸಭಾ ಭವನದಲ್ಲಿ ಬೆಳಿಗ್ಗೆ 9.40ಕ್ಕೆ ಈ ಸ್ಫೋಟ ನಡೆದಿದೆ. ಮೂರು ದಿನಗಳ ಸಮಾವೇಶದ ಕೊನೆಯ ದಿನವಾದ ಭಾನುವಾರ ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು

ಇದನ್ನೂ ಓದಿ

Video | ಕೊಚ್ಚಿಯಲ್ಲಿ ನಡೆದ ಸ್ಫೋಟಕ್ಕೆ ಐಇಡಿ ಬಳಕೆ: ಕೇರಳ ಡಿಜಿಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT