ಮಲಪ್ಪುರಂ: ಅತ್ಯಂತ ವಿರಳ ಮತ್ತು ಮಾರಣಾಂತಿಕ ಮಿದುಳು ಸೋಂಕಾದ ಅಮೀಬಿಕ್ ಮೆನಿಂಗೋಎನ್ಸೆಫಲಿಟಿಸ್ ಕಾಯಿಲೆಗೆ ತುತ್ತಾಗಿ ಕೇರಳದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಆಗಸ್ಟ್ನಿಂದ ಈವರೆಗೆ ಈ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.

ಕೋಯಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 54 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಶನಿವಾರ ಇದೇ ಕಾಯಿಲೆಯಿಂದ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆಗಸ್ಟ್ನಲ್ಲಿ ಮೂವರು ಅಸುನೀಗಿದ್ದರು.

ಈ ಕಾಯಿಲೆಯ ಲಕ್ಷಣ ಕಾಣಿಸಿಕೊಂಡ ಹಲವರು ಕೊಯಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೇರಳ ಆರೋಗ್ಯ ಇಲಾಖೆ ಇತ್ತೀಚೆಗೆ ಕಲುಷಿತ ನೀರಿನಲ್ಲಿ ವಾಸಿಸುವ ಅಮೀಬಾದಿಂದ ಉಂಟಾಗುವ ಈ ಅಪರೂಪದ ಮಿದುಳಿನ ಸೋಂಕಿನ ಚಿಕಿತ್ಸೆಗಾಗಿ ವಿಶೇಷ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ವರ್ಷ ಕೇರಳದಲ್ಲಿ 42 ಪ್ರಕರಣಗಳು ದಾಖಲಾಗಿವೆ.
.ಆಳ–ಅಗಲ | ‘ದೇವರ ನಾಡ’ಲ್ಲಿ ಆತಂಕ ತಂದ ‘ಮಿದುಳು ತಿನ್ನುವ ಅಮೀಬಾ’.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.