ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ತೆರಿಗೆ ಅನ್ಯಾಯ ಆರೋಪ: ದೆಹಲಿಯಲ್ಲಿ ಕೇರಳ ಸರ್ಕಾರದ ಪ್ರತಿಭಟನೆ

Published 8 ಫೆಬ್ರುವರಿ 2024, 6:17 IST
Last Updated 8 ಫೆಬ್ರುವರಿ 2024, 6:17 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದಿಂದ ಆಗುತ್ತಿರುವ ತೆರಿಗೆ ಅನ್ಯಾಯದ ವಿರುದ್ಧ ಕೇರಳದ ಆಡಳಿತರೂಢ ಎಲ್‌ಡಿಎಫ್‌ ಸರ್ಕಾರ ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು.

‘ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ’ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

‘ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೇವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಇದೇ ವೇಳೆ ಅನುದಾನ ತಾರತಮ್ಯವನ್ನು ಖಂಡಿಸಿ ಸಂಸತ್‌ನ ಗಾಂಧಿ ಪ್ರತಿಮೆ ಎದುರು ಡಿಎಂಕೆ ಸಂಸದರು ಪತ್ರಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT