ರಾಜ್ಯ, ರಾಷ್ಟ್ರೀಯ, ವಿದೇಶ, ವಾಣಿಜ್ಯ ಹಾಗೂ ಕ್ರೀಡೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರು ಸತೀಶನ್ ಅವರಿಗೆ ಪ್ರತಿಜ್ಞಾವಿಧಿ ಬೊಧಿಸಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಯುಡಿಎಫ್ ಮೈತ್ರಿಕೂಟದ ನಾಯಕರು ಭಾಗವಹಿಸಿದ್ದರು.
.ಕೇರಳಂ ನೂತನ ಸಿಎಂ ಆಗಿ ಸತೀಶನ್ ಪ್ರಮಾಣ: ರಾಹುಲ್, ಪ್ರಿಯಾಂಕಾ ಸೇರಿ ಗಣ್ಯರು ಭಾಗಿ.
ಸ್ವೀಡನ್ನ ಪ್ರತಿಷ್ಠಿತ ‘ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್, ಡಿಗ್ರಿ ಕಮಾಂಡರ್ ಗ್ರ್ಯಾಂಡ್ ಕ್ರಾಸ್’ ಪುರಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ.

ಸ್ವೀಡನ್ ರಾಜಕುಮಾರಿ ವಿಕ್ಟೋರಿಯಾ ಅವರು ಗೋಥೆನ್ಬರ್ಗ್ನಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಇದರೊಂದಿಗೆ, ಈ ಗೌರವಕ್ಕೆ ಭಾಜನರಾದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಗೆ ಮೋದಿ ಅವರದ್ದಾಯಿತು.
.ಪ್ರಧಾನಿ ಮೋದಿಗೆ ಸ್ವೀಡನ್ ಸರ್ಕಾರದ ಅತ್ಯುನ್ನತ ಪುರಸ್ಕಾರ.
‘ಮುಂದಿನ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 75–80 ಸ್ಥಾನ ಗೆಲ್ಲಲಿದ್ದು, ನಮ್ಮನ್ನು ಟೀಕಿಸುವವರಿಗೆ ತಕ್ಕ ಉತ್ತರ ನೀಡಲಿದ್ದೇವೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
.ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 75–80 ಸ್ಥಾನ ಗೆಲ್ಲಲಿದೆ: ಎಚ್ಡಿಕೆ.ರಾಜ್ಯದಾದ್ಯಂತ ಎರಡು ದಿನ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವ: IMD .
ಯುನೈಟೆಡ್ ಅರಬ್ ಎಮಿರೇಟ್ಸ್ನ (ಯುಎಇ) ಬರಕಾ ಪರಮಾಣು ವಿದ್ಯುತ್ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆಸಲಾದ ಡ್ರೋನ್ ದಾಳಿಯನ್ನು ‘ಅಪಾಯಕಾರಿ ನಡೆ’ ಎಂದು ಭಾರತ ತೀವ್ರವಾಗಿ ಖಂಡಿಸಿದೆ.

ಹೆಚ್ಚುತ್ತಿರುವ ಪ್ರಾದೇಶಿಕ ಉದ್ವಿಗ್ನತೆಯ ಮಧ್ಯೆ, ಭಾರತವು ಎಲ್ಲಾ ದೇಶಗಳಿಗೂ ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಒತ್ತಾಯಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
.UAE ಪರಮಾಣು ವಿದ್ಯುತ್ ಸ್ಥಾವರ ಗುರಿಯಾಗಿಸಿ ಡ್ರೋನ್ ದಾಳಿ: ಭಾರತ ತೀವ್ರ ಖಂಡನೆ.
ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಹಾಗೂ ನಮ್ಮೊಂದಿಗೆ ಸಹಬಾಳ್ವೆಯಿಂದ ಇರುವುದನ್ನು ಕಲಿಯಬೇಕು ಎಂದು ಪಾಕಿಸ್ತಾನ ಸೇನೆ ಹೇಳಿದೆ.

ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ ಇತ್ತೀಚಿನ ಹೇಳಿಕೆಗಳನ್ನು ಟೀಕಿಸಿರುವ ಸೇನೆಯು, ‘ಪಾಕಿಸ್ತಾನವನ್ನು ಗುರಿಯಾಗಿಸುವ ಯಾವುದೇ ಕ್ರಮ ಕೈಗೊಂಡಲ್ಲಿ, ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದೂ ಹೇಳಿದೆ.
.ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು, ಸಹಬಾಳ್ವೆಯನ್ನು ಕಲಿಯಬೇಕು ಎಂದ ಪಾಕ್ ಸೇನೆ.
ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದಿಂದ (ಎಫ್ಟಿಎ) ಕೈಗಾರಿಕೋದ್ಯಮಿಗಳು, ಹೂಡಿಕೆದಾರರಿಗೆ ಹೊಸ ಅವಕಾಶಗಳು ದೊರೆಯಲಿವೆ ಎಂದು ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾಂಡರ್ ಲೇಯನ್ ಹೇಳಿದ್ದಾರೆ.

ಯುರೋಪಿನ ಪ್ರಮುಖ ಕೈಗಾರಿಕೋದ್ಯಮಿಗಳು ಸಭೆಗೂ ಮುನ್ನ ಪ್ರಧಾನಿ ಮೋದಿ ಮತ್ತು ಸ್ವೀಡನ್ ಪ್ರಧಾನಿ ಉಲ್ಫ್ ಕ್ರಿಸ್ಟೆರ್ಸನ್ ಅವರೊಂದಿಗೆ ವಾಂಡರ್ ಲೇಯನ್ ಮಾತುಕತೆ ನಡೆಸಿದ್ದಾರೆ.
.ವರ್ಷಾಂತ್ಯಕ್ಕೆ ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ವಾಂಡರ್ ಲೇಯನ್.
ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳ ಮರುಮೌಲ್ಯಮಾಪನ ಮತ್ತು ಉತ್ತರ ಪತ್ರಿಕೆ ಪರಿಶೀಲನಾ ಶುಲ್ಕವನ್ನು ಪ್ರತಿ ಪತ್ರಿಕೆಗೆ ₹100ಕ್ಕೆ ಇಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದೆ.ಅಲ್ಲದೆ, ಆನ್–ಸ್ಕ್ರೀನ್ ಮಾರ್ಕಿಂಗ್ (ಒಎಸ್ಎಂ) ವ್ಯವಸ್ಥೆ ಅಳವಡಿಸಿರುವುದರಿಂದ ವಿದ್ಯಾರ್ಥಿಗಳ ಅಂಕಗಳ ಮೇಲೆ ಪರಿಣಾಮ ಬೀರುತ್ತದೆ ಎಂಬ ವಿದ್ಯಾರ್ಥಿಗಳ ಕಳವಳವನ್ನು ಕೂಡ ಸಚಿವಾಲಯ ತಳ್ಳಿಹಾಕಿದೆ.
.ಸಿಬಿಎಸ್ಇ: ಮರು ಮೌಲ್ಯಮಾಪನ ಶುಲ್ಕ ₹100ಕ್ಕೆ ಇಳಿಕೆ.
ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಅವರ ತಾಯಿ, ಮಾಜಿ ಒಲಿಂಪಿಯನ್ ಬ್ಯಾಸ್ಕೆಟ್ಬಾಲ್ ಆಟಗಾರ್ತಿ ಜೆನ್ನಿಫರ್ ಪೇಸ್ (72) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾದರು.

ಭಾರತೀಯ ಮಹಿಳಾ ಬ್ಯಾಸ್ಕೆಟ್ಬಾಲ್ನ ಪ್ರವರ್ತಕರಲ್ಲಿ ಒಬ್ಬರಾಗಿರುವ ಜೆನ್ನಿಫರ್ ಅವರು 1972ರ ಮ್ಯೂನಿಚ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ನಂತರ ಭಾರತ ಮಹಿಳಾ ಬ್ಯಾಸ್ಕೆಟ್ಬಾಲ್ ತಂಡದ ನಾಯಕತ್ವ ವಹಿಸಿದ್ದರು.
.ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ಗೆ ಮಾತೃವಿಯೋಗ.
ವೆಂಕಟೇಶ್ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಅವರ ಅಮೋಘ ಆಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು ಜಯಭೇರಿ ಬಾರಿಸಿತು. ಈ ಸಲದ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡವಾಯಿತು.

ಭಾನುವಾರ ಮಧ್ಯಾಹ್ನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಆತಿಥೇಯ ಪಂಜಾಬ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ನಾಯಕ ರಜತ್ ಪಾಟೀದಾರ್ ಗೈರು ಹಾಜರಿಯಿಂದಾಗಿ ಸ್ಥಾನ ಪಡೆದ ವೆಂಕಟೇಶ್ ಅಯ್ಯರ್ 40 ಎಸೆತಗಳಲ್ಲಿ ಅಜೇಯ 73 ರನ್ ಹೊಡೆದರು. ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ (58; 37ಎ) ಮತ್ತು ದೇವದತ್ತ ಪಡಿಕ್ಕಲ್ (45; 25ಎ) ಅವರು ಉತ್ತಮ ಆರಂಭ ನೀಡಿದರು. ಇದರಿಂದಾಗಿ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್ಗಳಿಗೆ 222 ರನ್ ಗಳಿಸಿತು.
.ಅಯ್ಯರ್ ಭರಾಟೆಗೆ ಮಣಿದ ಶ್ರೇಯಸ್ ಪಡೆ: ಪ್ಲೇ ಆಫ್ ಪ್ರವೇಶಿಸಿದ ಆರ್ಸಿಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.