ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.ಏಪ್ರಿಲ್ 8ರಂದು ಅವರಿಗೆ ಸೋಂಕುದೃಢಪಟ್ಟಿತ್ತು.

ಆಸ್ಪತ್ರೆಗೆ ದಾಖಲಾದಏಳು ದಿನಗಳ ಬಳಿಕವಿಜಯನ್ ಅವರಿಗೆ ಕೋವಿಡ್ ನೆಗೆಟಿವ್ ವರದಿ ಬಂದಿದ್ದು, ಬುಧವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಜಯನ್, ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿಮಾರ್ಚ್3 ರಂದು ಲಸಿಕೆ ಹಾಕಿಸಿಕೊಂಡಿದ್ದರು. ಆದರೆ, ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಪ್ರಚಾರದ ಸಲುವಾಗಿ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದರು. ಏಪ್ರಿಲ್6 ರಂದು ಮತದಾನ ನಡೆದಿದ್ದು, ಫಲಿತಾಂಶ ಮೇ 2ರಂದು ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.