ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಬಾಲಕಿ ಅತ್ಯಾಚಾರ: 20 ವರ್ಷ ಜೈಲು

Published 18 ಜನವರಿ 2024, 16:23 IST
Last Updated 18 ಜನವರಿ 2024, 16:23 IST
ಅಕ್ಷರ ಗಾತ್ರ

ಕೊಚ್ಚಿ: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 44 ವರ್ಷದ ವ್ಯಕ್ತಿಗೆ ಕೇರಳ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ಆದೇಶಿಸಿದೆ.

ಮುವಾಟ್ಟುಪುಳದ ವಿಶೇಷ ನ್ಯಾಯಾಧೀಶ (ಪೋಕ್ಸೊ) ಪಿ.ವಿ.ಅನೀಶ್‌ ಕುಮಾರ್‌ ಅವರು ಪೋಕ್ಸೊ ಕಾಯ್ದೆಯ ಸೆಕ್ಷನ್‌ 4ರ ಅಡಿಯಲ್ಲಿ ಜಿಲಾನಿ ಎಂಬಾತನಿಗೆ 20 ವರ್ಷಗಳ ಶಿಕ್ಷೆ ಪ್ರಕಟಿಸಿದರು.

ಈ ಶಿಕ್ಷೆಯ ಜತೆಗೆ ಅಪರಾಧಿಗೆ ₹ 50 ಸಾವಿರ ದಂಡವನ್ನೂ ವಿಧಿಸಲಾಗಿದೆ. ಈ ಮೊತ್ತವನ್ನು ಪರಿಹಾರವಾಗಿ ಸಂತ್ರಸ್ತೆಗೆ ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಸಂತ್ರಸ್ತೆಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೂ ನ್ಯಾಯಾಲಯ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT