ಫೌಂಡೇಶನ್ ಅಧ್ಯಕ್ಷೆ ನೀತಾ ಅಂಬಾನಿ ಅವರು ದೇಣಿಗಯ ಚೆಕ್ ಅನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹಸ್ತಾಂತರಿಸಿದರು. ಪುನರ್ವಸತಿ ಕೇಂದ್ರಗಳಲ್ಲಿರುವವರಿಗೆ ಆಹಾರಧಾನ್ಯ, ಬಟ್ಟೆ, ಔಷಧಿಗಳನ್ನು ಫೌಂಡೇಶನ್ ಕಾರ್ಯಕರ್ತರು ವಿತರಿಸಿದರು. ಪ್ರವಾಹದಿಂದ ಹೆಚ್ಚಿನ ಹಾನಿ ಸಂಭವಿಸಿರುವ ವಯನಾಡ್ ಮತ್ತು ಅಲಪ್ಪಿ ಜಿಲ್ಲೆಗಳಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದೆ.