ತಿರುವನಂತಪುರ : ಕೇರಳಂ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಬಸ್ಗಳಲ್ಲಿ ಜೂನ್ 15ರಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲಾಗುವುದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳ ಮಾಡಲಾಗುವುದು ಮತ್ತು ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಇಲಾಖೆ ರಚಿಸಲಾಗುವುದು ಎಂದು ಕೇರಳಂನ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್ ಘೋಷಿಸಿದರು.

ಈ ಮೂಲಕ ಕೇರಳಂನ ನೂತನ ಸರ್ಕಾರವು, ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ ಭರವಸೆಗಳ ಜಾರಿಗೆ ಮುಂದಾಗಿದೆ.

ಮುಖ್ಯಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ ಸತೀಶನ್ ಅವರು, ಸಂಪುಟ ತೆಗೆದುಕೊಂಡ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಕುರಿತು ವಿವರವಾದ ಮಾರ್ಗಸೂಚಿಯನ್ನು ಶೀಘ್ರದಲ್ಲಿಯೇ ಹೊರಡಿಸಲಾಗುವುದು ಎಂದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ವೃದ್ಧರಿಗಾಗಿ ಪ್ರತ್ಯೇಕ ಇಲಾಖೆ ರಚಿಸುವ ನಿರ್ಧಾರವನ್ನು ಸಂಪುಟ ತೆಗೆದುಕೊಂಡಿದೆ ಎಂದರು.

ಜಪಾನ್ ಮಾದರಿಯಲ್ಲಿ ಹಿರಿಯ ನಾಗರಿಕರಿಗೆ ಬೆಂಬಲ ನೀಡುವುದರ ಜತೆಗೆ ಆರೈಕೆ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ವೃದ್ಧರ ಜೀವನ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇರಳ ಮಾದರಿಯಾಗಲಿದೆ ಎಂದು ಹೇಳಿದರು.

ಗೌರವಧನ ಹೆಚ್ಚಳ:

ಆಶಾ ಕಾರ್ಯಕರ್ತರ ಪ್ರತಿಭಟನೆಗಳ ಸಂದರ್ಭದಲ್ಲಿ ನೀಡಿದ್ದ ಭರವಸೆ ಈಡೇರಿಸುವತ್ತ ಗಮನ ನೀಡಲಾಗಿದ್ದು, ಅವರ ಗೌರವಧನವನ್ನು ತಿಂಗಳಿಗೆ ₹3,000 ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಶಾಲಾ ಅಡುಗೆ ಸಿಬ್ಬಂದಿ, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಆಯಾಗಳಿಗೆ ತಿಂಗಳಿಗೆ ತಲಾ ₹ 1,000 ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್–ಯುಡಿಎಫ್ ನೀಡಿದ್ದ ‘ಇಂದಿರಾ ಗ್ಯಾರಂಟಿ’ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮತ್ತು ವೃದ್ಧರ ಆರೈಕೆಗೆ ಹೊಸ ಇಲಾಖೆ ರಚನೆಗಳು ಸೇರಿವೆ. ಆಶಾ ಕಾರ್ಯಕರ್ತರು ಮತ್ತು ಇತರ ದುರ್ಬಲ ವರ್ಗದವರ ವೇತನ ಹೆಚ್ಚಿಸುವ ಭರವಸೆಯನ್ನೂ ಯುಡಿಎಫ್ ನೀಡಿತ್ತು.

ಹಂಗಾಮಿ ಸ್ಪೀಕರ್ಗೆ ಸುಧಾಕರನ್ ಹೆಸರು

ಹಿರಿಯ ಶಾಸಕ ಜಿ. ಸುಧಾಕರನ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲು ಸಂಪುಟ ಶಿಫಾರಸು ಮಾಡಿದೆ. ಶಾಸಕರ ಪ್ರಮಾಣವಚನ ಮತ್ತು ಸ್ಪೀಕರ್ ಆಯ್ಕೆಗಾಗಿ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರನ್ನು ಕೋರಲು ನಿರ್ಧರಿಸಲಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು.

ಇದೇ 21ರಂದು ಶಾಸಕರ ಪ್ರಮಾಣವಚನ ಮತ್ತು ಇದೇ 22ರಂದು ಸ್ಪೀಕರ್ ಆಯ್ಕೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಮರು ತನಿಖೆಗೆ ಎಸ್ಐಟಿ ರಚನೆ: ಆಲಪ್ಪುಳದಲ್ಲಿ 2023ರಲ್ಲಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸಂಪುಟ ಅನುಮೋದನೆ ನೀಡಿದೆ.

ಈ ಪ್ರಕರಣದ ಮರು ತನಿಖೆಗೆ ಆಲಪ್ಪುಳ ಜಿಲ್ಲಾ ನ್ಯಾಯಾಲಯ 2024ರ ನವೆಂಬರ್ 8ರಂದು ಆದೇಶಿಸಿತ್ತು. ಆದರೆ ಹಿಂದಿನ ಸರ್ಕಾರ ಈ ಕುರಿತು ನಿರ್ಲಕ್ಷ್ಯ ತೋರಿತ್ತು ಎಂದು ಸಿ.ಎಂ ದೂರಿದರು.

ರಾಜಕೀಯ ದ್ವೇಷದ ಆರೋಪಗಳನ್ನು ತಿರಸ್ಕರಿಸಿದ ಅವರು ‘ಸರ್ಕಾರ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸುತ್ತಿದೆ. ಆದರೆ ‘ಹಿಂದೆ ನಡೆದದ್ದನ್ನು ನಾವು ಮರೆತಿಲ್ಲ’ ಎಂದು ಸೂಚ್ಯವಾಗಿ ಎಂದು ಹೇಳಿದರು. ರಾಜ್ಯ ಮತ್ತು ಸರ್ಕಾರದ ಖಜಾನೆಯ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲಾಗುವುದು ಎಂದೂ ಅವರು ತಿಳಿಸಿದರು.

ಬಂಗಾಳದಲ್ಲೂ ಉಚಿತ ಬಸ್ ಸೌಲಭ್ಯ-ಇಮಾಮ್, ಅರ್ಚಕರ ‘ಧನ’ಕ್ಕೆ ಕೊಕ್

ಕೋಲ್ಕತ್ತ: ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು, ಸೋಮವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಇಮಾಮ್ಗಳು ಹಾಗೂ ಅರ್ಚಕರಿಗೆ ನೀಡುತ್ತಿದ್ದ ಗೌರವಧನ ಸ್ಥಗಿತಗೊಳಿಸು
ವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಧರ್ಮಾಧಾರಿತ ಗುಂಪುಗಳಿಗೆ ನೀಡುತ್ತಿದ್ದ ನೆರವು ಯೋಜನೆಯನ್ನು ಜೂನ್ ನಿಂದ ಕೈಬಿಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಇಮಾಮ್ಗಳು, ಅರ್ಚಕರಿಗೆ ಸಿಗುತ್ತಿದ್ದ ಗೌರವಧನ ಸ್ಥಗಿತಗೊಳ್ಳಲಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಈ ಹಿಂದಿನ ಸರ್ಕಾರ, ನೋಂದಾಯಿತ ಮಸೀದಿಗಳ ಇಮಾಮ್ಗಳಿಗೆ ತಿಂಗಳಿಗೆ ₹3,000 ಮತ್ತು ಪುರೋಹಿತರಿಗೆ ತಿಂಗಳಿಗೆ ₹2,000 ಗೌರವಧನ ನೀಡುತ್ತಿತ್ತು.

ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವೆ ಅಗ್ನಿಮಿತ್ರ ಪೌಲ್ ಅವರು, ಮಹಿಳೆಯರಿಗೆ ಜೂನ್ 1ರಿಂದ ಪ್ರತಿ ತಿಂಗಳು ₹3,000 ನೆರವು ನೀಡುವ ‘ಅನ್ನಪೂರ್ಣ’ ಯೋಜನೆ ಜಾರಿಗೆ ಹಾಗೂ ಮಹಿಳೆಯರು ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಂಪುಟ ಅನುಮೋದನೆ ನೀಡಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.