ತಿರುವನಂತಪುರ: ‘ಕೇರಳದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ ಕೂಡಿದೆ. ಕಳ್ಳಸಾಗಾಣಿಕೆ ತಂಡವು ಕೃತ್ಯಕ್ಕಾಗಿ ಯುಎಇ ದೂತಾವಾಸದ ನಕಲಿ ದಾಖಲೆಗಳನ್ನು ಬಳಸಿತ್ತು’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎಎನ್‌ಐ) ಹೇಳಿದೆ.

ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ನೀಡಿದ ಮಾಹಿತಿ ಆಧಾರದಲ್ಲಿ ಯುಎಇ ದೂತಾವಾಸ ಕಚೇರಿಯ ಮಾಜಿ ಉದ್ಯೋಗಿಯೊಬ್ಬರ ವಿಚಾರಣೆಗೆ ಅನುಮತಿ ಕೋರಿ ಕೊಚ್ಚಿಯಲ್ಲಿರುವ ಎನ್‌ಐಎ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಬಂಧಿತ ಆರೋಪಗಳನ್ನು ಸದ್ಯ ವಿಚಾರಣೆಗಾಗಿ ಎನ್‌ಐಎ ವಶಕ್ಕೊಪ್ಪಿಸಲಾಗಿದೆ.

ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಚಿನ್ನ ಕಳ್ಳಸಾಗಾಣಿಕೆ ನಡೆಸಲು ಯುಎಇ ದೂತಾವಾಸ ಕಚೇರಿಯ ನಕಲಿ ಲಾಂಛನ ಮತ್ತು ಸೀಲ್‌ಗಳನ್ನು ಬಳಸಿದ್ದರು. ಅವುಗಳನ್ನು ಬಳಸಿಕೊಂಡು ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ನಡೆಸಿದ್ದರು. ದೂತಾವಾಸ ಕಚೇರಿ ಅಧಿಕಾರಿಗಳಿಗೆ ಗೊತ್ತಾಗದಂತೆ ಆರೋಪಿಗಳು ಈ ಕೃತ್ಯ ನಡೆಸಿರಬಹುದು ಎಂದು ನ್ಯಾಯಾಲಯದ ಮುಂದೆ ತನಿಖಾ ಸಂಸ್ಥೆ ಹೇಳಿದೆ ಎನ್ನಲಾಗಿದೆ.

ಇದನ್ನೂ ಓದಿ:ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ

ಪ್ರಕರಣದ ಮೂರನೇ ಆರೋಪಿ ಫೈಜಲ್ ಫರೀದ್‌ನನ್ನು ಬಂಧಿಸಲು ವಾರಂಟ್‌ಗಾಗಿಯೂ ಎನ್‌ಐಎ ಮನವಿ ಸಲ್ಲಿಸಿದೆ. ಫರೀದ್ ಯುಎಇಯಲ್ಲಿ ಇದ್ದಾನೆ ಎನ್ನಲಾಗಿದ್ದು, ಆತನ ಗಡಿಪಾರು ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಈ ಮಧ್ಯೆ, ಭಾನುವಾರ ಬಂಧನಕ್ಕೊಳಗಾಗಿರುವ ಮಲಪ್ಪುರಂ ನಿವಾಸಿ ಕೆ.ಟಿ.ರಮೀಜ್ ಈ ಹಿಂದೆಯೂ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂಬುದು ತಿಳಿದುಬಂದಿದೆ. ರಮೀಜ್ ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಸೂತ್ರಧಾರ ಇರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ:ಲಾಕ್ಡೌನ್ ವೇಳೆ ಸ್ವಪ್ನಾ ಕೇರಳದಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದು ಹೇಗೆ?

ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಯುಎಇ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಇತ್ತೀಚೆಗೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಪ್ರಕರಣವು ಕೇರಳದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದೆ.

ಇನ್ನಷ್ಟು...

ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಬೆಂಗಳೂರಲ್ಲಿ ಸೆರೆ

ಚಿನ್ನ ಸ್ಮಗ್ಲಿಂಗ್: ತನಿಖಾ ಸಂಸ್ಥೆ ಆಯ್ಕೆಗೆ ಕೇಂದ್ರ ಸ್ವತಂತ್ರ, ಪಿಣರಾಯಿ ವಿಜಯನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.