ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಕಳ್ಳ ಸಾಗಣೆ ಪ್ರಕರಣ– 30 ಕೆ.ಜಿ ಚಿನ್ನ ಜಪ್ತಿ

Last Updated 15 ಸೆಪ್ಟೆಂಬರ್ 2021, 14:38 IST
ಅಕ್ಷರ ಗಾತ್ರ

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು 30.245 ಕೆ.ಜಿ ಚಿನ್ನವನ್ನು ಬುಧವಾರ ಜಪ್ತಿ ಮಾಡಿದ್ದಾರೆ.

ತಿರುವನಂತಪುರದಲ್ಲಿರುವ ಯುಎಇಯ ಕಾನ್ಸುಲೆಟ್‌ನ ಮಾಜಿ ಉದ್ಯೋಗಿಗಳಾದ ಸರಿತ್‌ ಪಿ.ಎಸ್‌ ಹಾಗೂ ಸ್ವಪ್ನ ಸುರೇಶ್‌ ಅವರಿಗೆ ಸೇರಿದ ₹ 14 ಲಕ್ಷಕ್ಕೂ ಅಧಿಕ ನಗದನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಜುಲೈ 5ರಂದು ಗಲ್ಫ್‌ನಿಂದ ಬಂದ ಏರ್‌ ಕಾರ್ಗೊ ಬ್ಯಾಗ್‌ವೊಂದರಲ್ಲಿ ₹15 ಕೋಟಿ ಮೌಲ್ಯದ 30 ಕೆ.ಜಿ ಚಿನ್ನ ಪತ್ತೆಯಾಗಿತ್ತು. ಇದನ್ನುತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ರಾಜತಾಂತ್ರಿಕ ಮಾರ್ಗಗಳನ್ನು ದುರುಪ‍ಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಆರೋಪಗಳಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಕಸ್ಟಮ್ಸ್‌, ಎನ್‌ಐಎ ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ) ಪ್ರತ್ಯೇಕ ತನಿಖೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT