ತಿರುವನಂತಪುರ: ಮಲಯಾಳಕ್ಕೆ ಕೇರಳದ ಏಕೈಕ ಅಧಿಕೃತ ಭಾಷೆ ಸ್ಥಾನಮಾನ ಕಲ್ಪಿಸುವ ಮಸೂದೆಗೆ ಅಲ್ಲಿನ ರಾಜ್ಯಪಾಲ ರಾಜೇಂದ್ರ ವಿ.ಅರ್ಲೇಕರ್ ಬುಧವಾರ ಅಂಕಿತ ಹಾಕಿದ್ದಾರೆ.

‘ಮಲಯಾಳಂ ಭಾಷಾ ಮಸೂದೆ 2025’ಅನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ವಿಧಾನಸಭೆ ಅಂಗೀಕರಿಸಿತ್ತು. ಇದಕ್ಕೆ ಈಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ’ ಎಂದು ಲೋಕಭವನ ಮೂಲಗಳು ಹೇಳಿವೆ.

ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ, 10ನೇ ತರಗತಿವರೆಗೆ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಲಿಸುವುದು ಕಡ್ಡಾಯ ಎಂಬ ಅಂಶವನ್ನು ಈ ಮಸೂದೆ ಒಳಗೊಂಡಿದೆ.

ಈ ಮಸೂದೆಗೆ ಕರ್ನಾಟಕ ಸರ್ಕಾರದಿಂದ ವಿರೋಧ ವ್ಯಕ್ತವಾಗಿತ್ತು. ಈ ಮಸೂದೆ ಕಾಯ್ದೆಯಾಗಿ ಜಾರಿಗೊಂಡ ಬಳಿಕ ಗಡಿಭಾಗದ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಲಯಾಳ ಕಲಿಯಬೇಕಾಗುತ್ತದೆ ಎಂದು ಕಳಕಳ ವ್ಯಕ್ತಪಡಿಸಿತ್ತು.

‘ಕನ್ನಡ ಮತ್ತು ತಮಿಳು ಮಾತನಾಡುವವರ ಹಕ್ಕುಗಳನ್ನು ರಕ್ಷಿಸುವುದಕ್ಕೆ ಸಂಬಂಧಿಸಿದ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.