ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೇಬಿಸ್‌ ರೋಗ: ಶಾಲೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇರಳ ಸರ್ಕಾರ

Published 7 ಜೂನ್ 2024, 11:26 IST
Last Updated 7 ಜೂನ್ 2024, 11:26 IST
ಅಕ್ಷರ ಗಾತ್ರ

ತಿರುವನಂತಪುರ: ರೇಬಿಸ್‌ ಸೊಂಕಿನಿಂದ ಮಕ್ಕಳನ್ನು ರಕ್ಷಿಸಲು ಕೇರಳ ಸರ್ಕಾರ ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 

ಬೀದಿ ನಾಯಿಗಳು ಶಾಲೆಯ ಆವರಣದಲ್ಲಿ ಉಳಿದುಕೊಂಡು ಸಂತಾನೋತ್ಪತ್ತಿ ಮಾಡುವುದನ್ನು ತಡೆಯಬೇಕು. ಜತೆಗೆ ಮಕ್ಕಳು ಪ್ರಾಣಿಗಳ ಬಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು. ಶಾಲೆಗಳಲ್ಲಿ ರೇಬಿಸ್‌ ಬಗ್ಗೆ ಎಚ್ಚರಿಕೆ ವಹಿಸಬೇಕು ಮತ್ತು ಅದನ್ನು ಹೇಗೆ ತಡೆಗಟ್ಟುವುದು ಎನ್ನುವುದನ್ನು ಮಕ್ಕಳಿಗೆ ತಿಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

ಯಾವುದೇ ಮಕ್ಕಳಿಗೆ ನಾಯಿ ಪರಚಿದಲ್ಲಿ ಅಥವಾ ಕಚ್ಚಿದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸೂಚನೆ ನೀಡಬೇಕು. ಇದರ ಜತೆಗೆ ಶಾಲೆಗಳಲ್ಲಿ ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ರೇಬಿಸ್‌ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT