ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಕೇರಳ ಅರ್ಜಿ

Published 23 ಮಾರ್ಚ್ 2024, 13:43 IST
Last Updated 23 ಮಾರ್ಚ್ 2024, 13:43 IST
ಅಕ್ಷರ ಗಾತ್ರ

ನವದೆಹಲಿ: ಕೇರಳ ವಿಧಾನಸಭೆಯು ಅಂಗೀಕಾರ ನೀಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುತ್ತಿಲ್ಲ ಎಂದು ದೂರಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ರಾಷ್ಟ್ರಪತಿ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಅಸಾಮಾನ್ಯ ನಡೆ ಎಂದು ವಿಶ್ಲೇಷಿಸಲಾಗಿದೆ.

ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 2) ಮಸೂದೆ –2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ – 2022, ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆ – 2022 ಹಾಗೂ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 3) ಮಸೂದೆ – 2022ಕ್ಕೆ ರಾಷ್ಟ್ರಪತಿ ಯಾವುದೇ ಕಾರಣ ಉಲ್ಲೇಖಿಸದೆ ಅಂಕಿತ ಹಾಕದೆ ಇರುವುದನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೇರಳ ಸರ್ಕಾರ ಕೋರಿದೆ.

ಕೇಂದ್ರ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳ ರಾಜ್ಯ‍ಪಾಲ ಆರೀಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ.

ರಾಜ್ಯಪಾಲರು ಈ ನಾಲ್ಕು ಮಸೂದೆಗಳು ಸೇರಿ ಒಟ್ಟು ಏಳು ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಗೆ ಇರಿಸಿಕೊಂಡ ಕ್ರಮವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂಬ ಕೋರಿಕೆಯನ್ನು ಕೂಡ ಸರ್ಕಾರವು ಕೋರ್ಟ್ ಮುಂದೆ ಇರಿಸಿದೆ. ರಾಜ್ಯದ ವ್ಯಾಪ್ತಿಯ ವಿಷಯಗಳಿಗೆ ಸಂಬಂಧಿಸಿದ ಈ ನಾಲ್ಕು ಮಸೂದೆಗಳಿಗೆ, ಯಾವ ನಿರ್ದಿಷ್ಟ ಕಾರಣವೂ ಇಲ್ಲದೆ, ಅಂಕಿತ ತಡೆಹಿಡಿಯುವಂತೆ ಕೇಂದ್ರ ಸರ್ಕಾರವು ರಾಷ್ಟ್ರಪತಿಯವರಿಗೆ ನೀಡಿರುವ ಸಲಹೆಯು ಸಂವಿಧಾನದ 14ನೆಯ ವಿಧಿಯ ಉಲ್ಲಂಘನೆ ಇದೆ ಎಂದು ಕೇರಳ ಸರ್ಕಾರವು ಅರ್ಜಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT