ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ ಶಾಲೆಯಲ್ಲಿ ರ‍್ಯಾಗಿಂಗ್: ತನಿಖೆಗೆ ಆದೇಶ

Published 8 ಜೂನ್ 2024, 16:09 IST
Last Updated 8 ಜೂನ್ 2024, 16:09 IST
ಅಕ್ಷರ ಗಾತ್ರ

ತಿರುವನಂತಪುರ: ವಯನಾಡ್ ಜಿಲ್ಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿಯೊಬ್ಬ ನೀಡಿರುವ ರ‍್ಯಾಗಿಂಗ್ ದೂರಿನ ಕುರಿತು ತನಿಖೆ ನಡೆಸುವಂತೆ ಕೇರಳ ಸರ್ಕಾರ ಶನಿವಾರ ಆದೇಶಿಸಿದೆ.

‘ಕೆಲವು ಸಹಪಾಠಿಗಳು ಕತ್ತರಿಯಿಂದ ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ’ ಎಂದು ದೂರು ನೀಡಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಬರಿನಾಥ್, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೂರಿನ ಕುರಿತು ಇಲಾಖಾ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು, ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ (ಅಕಾಡೆಮಿಕ್) ಎ. ಅಬೂಬಕರ್ ಅವರಿಗೆ ನಿರ್ದೇಶಿಸಿದ್ದಾರೆ.

ಘಟನೆ ನಡೆದಿರುವ ಶಾಲೆಗೆ ಭೇಟಿ ನೀಡಿ, ಸಂತ್ರಸ್ತ ವಿದ್ಯಾರ್ಥಿ ಮತ್ತು ಅವರ ಪೋಷಕರನ್ನೂ ಭೇಟಿ ಮಾಡುವಂತೆ ವಯನಾಡ್ ಜಿಲ್ಲೆಯ ಉಪ ನಿರ್ದೇಶಕರಿಗೆ ಸಚಿವರು ಸೂಚಿಸಿದ್ದಾರೆ.

ವಯನಾಡ್‌ನ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಸಚಿವ ಶಿವನ್‌ಕುಟ್ಟಿ ಈ ವಿಷಯ ಕುರಿತಂತೆ ಚರ್ಚಿಸಿದರು. ವಿದ್ಯಾರ್ಥಿಯ ತಾಯಿ ಹಾಗೂ ಶಾಲೆಯ ಪೋಷಕರು ಮತ್ತು ಶಿಕ್ಷಕರ ಸಂಘದ (ಪಿಟಿಎ) ಅಧ್ಯಕ್ಷರೊಂದಿಗೆ ಮಾತನಾಡಿದರು ಎಂದು ಸಚಿವರ ಕಚೇರಿ ತಿಳಿಸಿದೆ.

ಶಾಲಾ ಆವರಣದಲ್ಲಿ ರ‍್ಯಾಗಿಂಗ್‌ಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT