ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ | ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಾವು ಪ್ರಕರಣ: CBI ತನಿಖೆಗೆ

Published 9 ಮಾರ್ಚ್ 2024, 12:38 IST
Last Updated 9 ಮಾರ್ಚ್ 2024, 12:38 IST
ಅಕ್ಷರ ಗಾತ್ರ

ತಿರುವನಂತಪುರ: ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಕೇರಳ ಸರ್ಕಾರ ನಿರ್ಧರಿಸಿದೆ.

‘ಪೊಲೀಸರ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದರೂ, ಮೃತ ವಿದ್ಯಾರ್ಥಿಯ ಪೋಷಕರ ಮನವಿಯನ್ನು ಪರಿಗಣಿಸಿ ಸಿಬಿಐ ತನಿಖೆಗೆ ಈ ಪ್ರಕರಣವನ್ನು ಒಪ್ಪಿಸಲಾಗುವುದು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಯನಾಡ್‌ನ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಜೆ.ಎಸ್‌. ಸಿದ್ಧಾರ್ಥನ್ ಫೆ. 18ರಂದು ವಿಶ್ವವಿದ್ಯಾಲಯದ ಹಾಸ್ಟೆಲ್‌ನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ಮೂರು ದಿನ ಅನುಭವಿಸಿದ ಕ್ರೂರ ಚಿತ್ರಹಿಂಸೆ ಬಹಿರಂಗವಾಗಿದೆ. ಈ ಪ್ರಕರಣದ ಆರೋಪಿಗಳಲ್ಲಿ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್‌ಐ ಕಾರ್ಯಕರ್ತರಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT