ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಷಪ್‌ ಫ್ರಾಂಕೊ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೇರಳ ಹೈಕೋರ್ಟ್

ಕ್ರೈಸ್ತ ಸನ್ಯಾಸಿನಿ ಮೇಲಿನ ಅತ್ಯಾಚಾರ ಪ್ರಕರಣ
Last Updated 18 ಸೆಪ್ಟೆಂಬರ್ 2018, 10:49 IST
ಅಕ್ಷರ ಗಾತ್ರ

ತಿರುವನಂತಪುರ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ಜಲಂಧರ್‌ನ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರಾಂಕೊ ಮುಲ್ಲಕಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೇರಳ ಹೈಕೋರ್ಟ್ ಸೆ.25ಕ್ಕೆ ಮುಂದೂಡಿದೆ.

ಈ ಪ್ರಕರಣ ಸಂಬಂಧ ಬಿಷಪ್ ಇದೇ 19ರಂದು ತನಿಖಾ ತಂಡದ ಮುಂದೆ ಹಾಜರಾಗಬೇಕಿತ್ತು.

ಅತ್ಯಾಚಾರ ಆರೋಪ ಹೊರಿಸಿರುವ ಕ್ರೈಸ್ತ ಸನ್ಯಾಸಿನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದರು. ಜೊತೆಗೆ ಪ್ರಕರಣಕ್ಕೆ ಸಂಬಂಧ ಜಾಮೀನು ನೀಡಬೇಕೆಂದು ಕೋರ್ಟ್‌ ಮೊರೆ ಹೋಗಿದ್ದರು.

ಏನಿದು ಪ್ರಕರಣ?
2014ರಲ್ಲಿ ಬಿಷಪ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸನ್ಯಾಸಿನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಸನ್ಯಾಸಿನಿ ವೆಟಿಕನ್‍ಗೆ ಪತ್ರ ಬರೆದು ಬಿಷಪ್‌‍ನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದರು. ಬಿಷಪ್ ಈ ಪ್ರಕರಣವನ್ನು ಮುಚ್ಚಿಹಾಕಲು ರಾಜಕೀಯ ಮತ್ತು ಹಣದ ಬಲ ಉಪಯೋಗಿಸುತ್ತಿದ್ದಾರೆ ಎಂದು ಕ್ರೈಸ್ತ ಸನ್ಯಾಸಿನಿ ಆರೋಪಿಸಿದ್ದರು. ಆದರೆ ಈ ಆರೋಪಗಳೆಲ್ಲವೂ ಸುಳ್ಳು ಎಂದು ಬಿಷಪ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT