ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ: 17 ಆರೋಪಿಗಳಿಗೆ ಜಾಮೀನು

Published 25 ಜೂನ್ 2024, 20:26 IST
Last Updated 25 ಜೂನ್ 2024, 20:26 IST
ಅಕ್ಷರ ಗಾತ್ರ

ಕೊಚ್ಚಿ: 2022ರಲ್ಲಿ ಕೇರಳ ಪಾಲಕ್ಕಾಡ್ ಜಿಲ್ಲೆಯ ಆರ್‌ಎಸ್‌ಎಸ್ ಮುಖಂಡ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಪಿಎಫ್‌ಐನ 17 ಸದಸ್ಯರಿಗೆ ಕೇರಳ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳು ಕೇರಳ ರಾಜ್ಯ ಸೇರಿದಂತೆ ದೇಶದ ಹಲವೆಡೆ ಕೋಮುಗಲಭೆಗೆ ಪ್ರಚೋದನೆ ನೀಡಿದ ಆರೋಪದ ವಿಚಾರಣೆಯನ್ನು ಸಹ ಎದುರಿಸುತ್ತಿದ್ದಾರೆ. 

ನ್ಯಾಯಮೂರ್ತಿಗಳಾದ ಎ. ಕೆ. ಜಯಶಂಕರನ್ ನಂಬಿಯಾರ್ ಮತ್ತು ಶ್ಯಾಮ್ ಕುಮಾರ್ ವಿ.ಎಂ ಅವರನ್ನು ಒಳಗೊಂಡ ಪೀಠವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಇತರ ಒಂಬತ್ತು ಪಿಎಫ್‌ಐ ಸದಸ್ಯರಿಗೆ ಬಿಡುಗಡೆ ನಿರಾಕರಿಸುವ ಮೂಲಕ ಎನ್‌ಐಎ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT