ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯ್ಯಪ್ಪ ಭಕ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್: ರೆಹನಾ ಫಾತಿಮಾಗೆ ಜಾಮೀನು

Last Updated 14 ಡಿಸೆಂಬರ್ 2018, 13:02 IST
ಅಕ್ಷರ ಗಾತ್ರ

ಕೊಚ್ಚಿ: ಸಾಮಾಜಿಕ ಮಾಧ್ಯಮದಲ್ಲಿ ಅಯ್ಯಪ್ಪ ಭಕ್ತರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ಅವರಿಗೆ ಕೇರಳ ಹೈಕೋರ್ಟ್‌ ಶುಕ್ರವಾರ ಷರತ್ತು ಬದ್ಧ ಜಾಮೀನು ನೀಡಿದೆ.

ಮೂರು ತಿಂಗಳ ಕಾಲ ಪಂಪಾ ಪೊಲೀಸ್‌ ಠಾಣೆ ವ್ಯಾಪ್ತಿಗೆ ತೆರಳಬಾರದು ಮತ್ತು ಅನ್ಯಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಬಾರದು ಎಂದು ನ್ಯಾಯಾಲಯ ರೆಹನಾ ಅವರಿಗೆ ಷರತ್ತು ವಿಧಿಸಿದೆ.

39 ವರ್ಷದ ರೆಹನಾ ಅವರು ಅಕ್ಟೋಬರ್‌ನಲ್ಲಿ ಶಬರಿಮಲೆ ದೇಗುಲ ಸಂದರ್ಶಿಸಲು ಯತ್ನಿಸಿದ್ದರು. ಈ ವೇಳೆ ಭಕ್ತರು ಅವರನ್ನು ತಡೆದಿದ್ದರು.

ಬಿಎಸ್‌ಎನ್‌ಎಲ್‌ ಉದ್ಯೋಗಿಯಾಗಿರುವ ರೆಹನಾ ವಿರುದ್ಧ ಪಟ್ಟಣಂತಿಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್‌ 27ರಂದು ಪೊಲೀಸರು ಅವರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT