ಕೊಚ್ಚಿ: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳದಲ್ಲಿ ಶಾಲೆಗಳು ನಡೆಸುತ್ತಿರುವ ಆನ್ಲೈನ್ ತರಗತಿಗಳಿಗೆ ತಡೆ ನೀಡಲು ಕೇರಳ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ತಾಂತ್ರಿಕ ಸೌಲಭ್ಯ ಒದಗಿಸುವವರೆಗೆ ಆನ್ಲೈನ್ ತರಗತಿಗಳನ್ನು ನಡೆಸಬಾರದು ಎಂದು ರಾಜ್ಯ ಸರ್ಕಾರ ಮತ್ತು ಕೇರಳ ಮೂಲಸೌಕರ್ಯ ಮತ್ತು ಶಿಕ್ಷಣ ತಂತ್ರಜ್ಞಾನ (ಕೆಐಟಿಇ)ಗೆ ನಿರ್ದೇಶನ ನೀಡುವಂತೆ ಕೋರಿ ಪೋಷಕರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.

ಆದರೆ, ಈ ಹಂತದಲ್ಲಿ ಆನ್ಲೈನ್ ತರಗತಿಗಳಿಗೆ ತಡೆ ನೀಡುವ ತುರ್ತು ಕಾಣುತ್ತಿಲ್ಲ. ಹೀಗಾಗಿ ತಡೆ ನೀಡಲು ಸಾಧ್ಯವಿಲ್ಲ ಎಂದು ಸಿ.ಎಸ್. ಡಯಾಸ್ ಅವರ ನೇತೃತ್ವದ ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠ ತಿಳಿಸಿತು.

ತಾಂತ್ರಿಕ ಸೌಲಭ್ಯವಿಲ್ಲದೇ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕುಗ್ರಾಮಗಳ, ಪರಿಶಿಷ್ಟ ಜಾತಿ/ ಪಂಗಡಗಳ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ತಾರತಮ್ಯದಿಂದ ಕಾಣಲು ಇದು ಕಾರಣವಾಗುತ್ತದೆ ಎಂದು ಸಿಸಿ ಗಿರಿಜಾ ಎಂಬುವವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

ಮತ್ತೊಂದೆಡೆ, ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸುವ ಮೊದಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕೇರಳ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

2020ರ ಜೂನ್ 14 ರೊಳಗೆ ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಇಚ್ಛಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.