ನವದೆಹಲಿ: ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ಕೇರಳಂನಲ್ಲಿ ವಾಡಿಕೆಯಂತೆ ಜೂನ್ 1ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಈ ಬಾರಿ ವಾಡಿಕೆಗಿಂತ ನಾಲ್ಕು ದಿನ ಮುನ್ನ ಅಥವಾ ನಾಲ್ಕು ದಿನ ನಂತರ ಮುಂಗಾರು ಪ್ರವೇಶಿಸಬಹುದು ಎಂದು ಐಎಂಡಿ ಅಂದಾಜಿಸಿದೆ.

‘ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಹಾಗೂ ಅಂಡಮಾನ್ ನಿಕೋಬಾರ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲು ಅನುಕೂಲಕರ ಪರಿಸ್ಥಿತಿಯಿದೆ’ ಎಂದು ಇಲಾಖೆ ತಿಳಿಸಿದೆ.

ಮುಂಗಾರು ಉತ್ತರದ ಕಡೆಗೆ ಸಾಗುತ್ತಿದ್ದಂತೆ, ಈ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲ ಝಳ ತಗ್ಗುತ್ತದೆ. ಕಳೆದ ವರ್ಷ ಮೇ 24ರಂದು ಮುಂಗಾರು ಪ್ರವೇಶಿಸಿತ್ತು ಎಂದು ಅದು ಹೇಳಿದೆ.

ದೇಶದಲ್ಲಿ ಬೀಳುವ ಒಟ್ಟು ಮಳೆಯ ಪ್ರಮಾಣದಲ್ಲಿ ಶೇ 70ರಷ್ಟು ಮಳೆಯು ಮುಂಗಾರಿನ ನಾಲ್ಕು ತಿಂಗಳಲ್ಲೇ ಬೀಳುತ್ತದೆ. ದೇಶದ ಕೃಷಿ ಚಟುವಟಿಕೆಗಳು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿವೆ. ಹೀಗಾಗಿ ದೇಶದ ಆರ್ಥಿಕತೆಯ ಮೇಲೆ ಮುಂಗಾರು ಮಳೆಯು ಗಾಢವಾದ ಪರಿಣಾಮವನ್ನು ಉಂಟುಮಾಡುತ್ತದೆ.

ಭಾರತದಲ್ಲಿ ಈ ವರ್ಷ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ದೇಶದಲ್ಲಿ 1971ರಿಂದ 2020ರವರೆಗೆ ಮುಂಗಾರು ಅವಧಿಯಲ್ಲಿ ಸರಾಸರಿ 87 ಸೆಂ.ಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ 80 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಎಲ್ ನಿನೊ ಕಾರಣದಿಂದ ಈ ವರ್ಷ ದೇಶದಲ್ಲಿ ಕಡಿಮೆ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.