ಕೊಚ್ಚಿ: ಮಹಿಳೆಯೊಬ್ಬರನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಮನೆಯ ಆವರಣ ಗೋಡೆ ಸಮೀಪ ಎಸೆದ ಘಟನೆ ಕೇರಳ ಕೊಚ್ಚಿ ಸಮೀಪದ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
.ಕೇರಳ: ಮೇಕಪ್ ಮಾಡಿಸಿಕೊಳ್ಳಲು ಹೋಗುತ್ತಿದ್ದ ವಧುವಿಗೆ ಅಪಘಾತ; ಐಸಿಯುನಲ್ಲೇ ವಿವಾಹ.
ಪ್ರಕರಣ ಸಂಬಂಧ ಕೊಂತುರ್ತಿ ನಿವಾಸಿ ಜಾರ್ಜ್ ಕೆ.ಕೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ತಾನೇ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ಲೈಂಗಿಕ ಕಾರ್ಯಕರ್ತೆಯಾಗಿರುವ ಆಕೆಯನ್ನು ತೇವರದಲ್ಲಿರುವ ಬಾಲಕಿಯ ಪ್ರೌಢ ಶಾಲೆಯ ಬಳಿಯಿಂದ ತನ್ನ ಮನೆಗೆ ಕರೆದುಕೊಂಡು ಬಂದಿದ್ದ. ಹಣಕಾಸಿನ ವಿಚಾರದಲ್ಲಿ ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ಮಾತಿನ ಭರದಲ್ಲಿ ಕಬ್ಬಿಣದ ರಾಡ್ನಿಂದ ಆಕೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಕೊಚ್ಚಿ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ಟಾಮ್ ತಿಳಿಸಿದ್ದಾರೆ.
.ಎಸ್ಐಆರ್ | ಬಿಎಲ್ಒಗಳಿಗೆ ಒತ್ತಡ ಹೇರುತ್ತಿಲ್ಲ: ಕೇರಳ ಮುಖ್ಯ ಚುನಾವಣಾ ಆಯುಕ್ತ.
ವಿಚಾರಣೆ ವೇಳೆ ಕೃತ್ಯ ಎಸಗಿದ್ದನ್ನು ಆತ ಒಪ್ಪಿಕೊಂಡಿದ್ದಾನೆ. ಮೃತದೇಹವನ್ನು ಮನೆಯ ಹೊರಗೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದನಾದರೂ, ಸಾಧ್ಯವಾಗದೆ ಕುಸಿದು ಬಿದ್ದಿದ್ದಾನೆ. ಸಾಕು ಪ್ರಾಣಿಯೊಂದರ ಕಳೇಬರ ಎಂದು ಹೇಳಿ, ಅದನ್ನು ವಿಲೇವಾರಿ ಮಾಡಲು ನೆರೆಹೊರೆಯವರ ನೆರವನ್ನೂ ಆತ ಕೇಳಿದ್ದ ಎಂದು ವಿಚಾರಣೆ ವೇಳೆ ಹೇಳಿದ್ದಾಗಿ ಟಾಮ್ ತಿಳಿಸಿದ್ದಾರೆ.

ಮನೆಯ ಆವರಣ ಗೋಡೆ ಸಮೀಪ ಬಿದ್ದಿದ್ದ ಹೆಣವನ್ನು ಗಮನಿಸಿದ ಸ್ವಚ್ಛತಾ ತಂಡ ’ಹರಿತ ಕರ್ಮ ಸೇನಾ’ದ ಸದಸ್ಯರು ಸ್ಥಳೀಯ ಕೌನ್ಸಿಲರ್ಗೆ ಮಾಹಿತಿ ನೀಡಿದ್ದಾರೆ. ಅವರು ಪೊಲೀಸರಿಗೆ ತಿಳಿಸಿದ್ದಾರೆ.
.SIR ಪ್ರಶ್ನಿಸಿ ಕೇರಳ ಸೇರಿ ಹಲವು ರಾಜ್ಯಗಳ ಅರ್ಜಿ: ECಗೆ ಸುಪ್ರೀಂ ಕೋರ್ಟ್ ನೋಟಿಸ್.
ಪ್ರಾಥಮಿಕ ತನಿಖೆಯಲ್ಲಿ ಇದೊಂದು ಕೊಲೆ ಎಂದು ಸಾಬೀತಾಗಿದ್ದು, ಆತನ ಮನೆಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಹೆಚ್ಚಿನ ತನಿಖೆ ವೇಳೆ ನಡೆದ ಘಟನೆಗಳನ್ನೆಲ್ಲಾ ಆತ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಮಹಿಳೆ ಪಾಲಕ್ಕಾಡ್ ಮೂಲದವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
.ಅಂಗಾಂಗ ಕಸಿಗಾಗಿ ಇರಾನ್ಗೆ ಮಾನವ ಕಳ್ಳ ಸಾಗಣೆ: ಕೇರಳ ಹೆಲ್ತ್ ಕ್ಲಬ್ ಮೇಲೆ ತನಿಖೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.