ತಿರುವನಂತಪುರ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶನ್, ‘ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಕ್ಕಾಗಿ ಪಕ್ಷದ ಹೈಕಮಾಂಡ್ಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

‘ಎಐಸಿಸಿ ಯೋಜನೆಗಳನ್ನು ಸಂಘಟಿಸಿದ ಮತ್ತು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಲು ನಿರಂತರವಾಗಿ ಶ್ರಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಇದೇ ವೇಳೆ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರ ಪಾತ್ರವನ್ನೂ ಸತೀಶನ್ ಸ್ಮರಿಸಿದ್ದಾರೆ.

ಕೆ.ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ಇಬ್ಬರೂ ಸಿಎಂ ಸ್ಥಾನದ ರೇಸ್ನಲ್ಲಿದ್ದರು. ಮುಂದಿನ ದಿನಗಳಲ್ಲಿ ಇಬ್ಬರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದಾಗಿ ಸತೀಶನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಯನ್ನು ‘ದೈವದತ್ತ ಉಡುಗೊರೆ’ ಎಂದು ಬಣ್ಣಿಸಿದ ಅವರು, ಈ ಸಾಧನೆಗೆ ಸಹಕರಿಸಿದ ಪಕ್ಷದ ಕಾರ್ಯಕರ್ತರು ಮತ್ತು ಯುಡಿಎಫ್ ಮೈತ್ರಿಕೂಟದ ನಾಯಕರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಮತ್ತು ಜನರ ಜೀವನಮಟ್ಟವನ್ನು ಸುಧಾರಿಸಲು ಪಕ್ಷವು ಶ್ರಮಿಸಲಿದೆ ಎಂದು ಸತೀಶನ್ ಭರವಸೆ ವ್ಯಕ್ತಪಡಿಸಿದ್ದಾರೆ.

140 ಸದಸ್ಯ ಬಲದ ಕೇರಳಂ ವಿಧಾನಸಭೆಯಲ್ಲಿ ಯುಡಿಎಫ್ ಮೈತ್ರಿಕೂಟ 102 ಸ್ಥಾನಗಳಲ್ಲಿ ಗೆಲುವು ಗಳಿಸಿದೆ. ಈ ಪೈಕಿ ಕಾಂಗ್ರೆಸ್ 63 ಶಾಸಕರನ್ನು ಹೊಂದಿದೆ. ಅದರ ಮಿತ್ರಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 22, ಕೇರಳ ಕಾಂಗ್ರೆಸ್ (ಕೆಇಸಿ) ಎಂಟು ಮತ್ತು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮೂರು ಶಾಸಕರನ್ನು ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.