ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಯನಾಡ್‌: ಪೊಲೀಸ್–ಮಾವೋವಾದಿಗಳ ನಡುವೆ ಗುಂಡಿನ ಕಾಳಗ

Published 1 ಮೇ 2024, 3:11 IST
Last Updated 1 ಮೇ 2024, 3:11 IST
ಅಕ್ಷರ ಗಾತ್ರ

ವಯನಾಡ್‌: ವಯನಾಡ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕೇರಳ ಪೊಲೀಸರು ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಳಪ್ಪುಳದ ಕಂಬಮಲ ಅರಣ್ಯ ಪ್ರದೇಶದಲ್ಲಿ ಈ ಗುಂಡಿನ ಕಾಳಗ ನಡೆದಿದೆ. ಕೂಂಬಿಂಗ್‌ ನಡೆಸುತ್ತಿದ್ದ ಪೊಲೀಸರ ಮೇಲೆ ಮಾವೋವಾದಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಪೊಲೀಸರು 9 ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ.

ಮಾವೋವಾದಿಗಳು ಇರುವ ಗುಪ್ತಚರ ಮಾಹಿತಿ ಅನುಸರಿಸಿ ಕೂಂಬಿಂಗ್ ನಡೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನಾಲ್ಕು ಮಂದಿಯ ಶಂಕಿತ ಮಾವೋವಾದಿಗಳ ಗುಂಪು ಕಂಬಮಲಕ್ಕೆ ಆಗಮಿಸಿ ಏ.26ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಬಾರದು ಎಂದು ಜನರಲ್ಲಿ ವಿನಂತಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT