ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಶ್ಲೀಲ ಚಿತ್ರಕ್ಕೆ ಉತ್ತೇಜನ: ಕೇರಳದಲ್ಲಿ 41 ಮಂದಿ ಬಂಧನ

Last Updated 28 ಡಿಸೆಂಬರ್ 2020, 5:52 IST
ಅಕ್ಷರ ಗಾತ್ರ

ತಿರುವನಂತಪುರ: ಮಕ್ಕಳ ಅಶ್ಲೀಲ ಚಿತ್ರಗಳಿಗೆ ಉತ್ತೇಜನ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 41 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಾದವರಲ್ಲಿ ಕೆಲವು ಯುವಕರು ವೃತ್ತಿಪರ ಉದ್ಯೋಗದಲ್ಲಿದ್ದಾರೆ. ಇನ್ನು ಕೆಲವರು ಮಕ್ಕಳ ಸಾಗಣೆಯಲ್ಲಿ ತೊಡಗಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 339 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕಂಪ್ಯೂಟರ್‌ಗಳು, ಹಾರ್ಡ್‌ ಡಿಸ್ಕ್‌ಗಳು ಸೇರಿದಂತೆ 392 ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು 6ರಿಂದ 15 ವರ್ಷದ ಸ್ಥಳೀಯ ಮಕ್ಕಳನ್ನು ಬಳಸಿಕೊಂಡು ಚಿತ್ರಗಳು ಮತ್ತು ವಿಡಿಯೊಗಳನ್ನು ಮಾಡಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮನೋಜ್‌ ಅಬ್ರಹಂ ತಿಳಿಸಿದ್ದಾರೆ.

‘ಲಾಕ್‌ಡೌನ್‌ ಸಮಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಚಿತ್ರ ವೀಕ್ಷಣೆ ಹೆಚ್ಚಾಗಿರುವುದು ಗಮನಕ್ಕೆ ಬಂದಿತ್ತು. ಈ ಬಗ್ಗೆ ಇಂಟರ್‌ಪೋಲ್‌ ಸಹ ಎಚ್ಚರಿಕೆ ನೀಡಿತ್ತು. ಅತ್ಯಾಧುನಿಕ ಉಪಕರಣಗಳನ್ನು ಬಳಸಿ ಆರೋಪಿಗಳನ್ನು ಬಂಧಿಸಲಾಯಿತು. ಕೇರಳದಾದ್ಯಂತ 596 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ತಿರುವನಂತಪುರದಲ್ಲೇ 58 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

‘ಆಪರೇಷನ್‌ ಪಿ–ಹಂಟ್‌ 20.3’ ಹೆಸರಿನಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT