ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇವಿಎಂ ಕುರಿತು ಅಪಪ್ರಚಾರ: ಕೇರಳದಲ್ಲಿ 12 ಪ್ರಕರಣ ದಾಖಲು

Published 10 ಏಪ್ರಿಲ್ 2024, 16:23 IST
Last Updated 10 ಏಪ್ರಿಲ್ 2024, 16:23 IST
ಅಕ್ಷರ ಗಾತ್ರ

ತಿರುವನಂತಪುರ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಕುರಿತು ಸುಳ್ಳು ಸುದ್ದಿ ಹರಡುತ್ತಿದ್ದ ಆರೋಪದಲ್ಲಿ ರಾಜ್ಯದಾದ್ಯಂತ ಒಟ್ಟು 12 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆ, ಎರ್ನಾಕುಳಂ ಮತ್ತು ತ್ರಿಶ್ಶೂರ್‌ ನಗರಗಳಲ್ಲಿ ತಲಾ ಎರಡು ಪ್ರಕರಣಗಳು, ತಿರುವನಂತಪುರ ಗ್ರಾಮಾಂತರ, ಕೊಲ್ಲಂ ನಗರ, ಪತ್ತನಂತಿಟ್ಟಾ, ಆಲಪ್ಪುಳ, ಪಾಲಕ್ಕಾಡ್‌ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಫೇಸ್‌ಬುಕ್‌ ಪೋಸ್ಟ್‌ ಮೂಲಕ ವಿವರಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಕಲಿ ಇವಿಎಂಗಳನ್ನು ಬಳಸಲಾಗುತ್ತಿದೆ ಎಂಬ ಸುಳ್ಳುಸುದ್ದಿಯನ್ನು ಪ್ರಚಾರ ಮಾಡಿದ್ದು, ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT