ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Kerala COVID-19 Updates: 265 ಪ್ರಕರಣಗಳು ದೃಢ, ಒಂದು ಸಾವು

Published 22 ಡಿಸೆಂಬರ್ 2023, 4:51 IST
Last Updated 22 ಡಿಸೆಂಬರ್ 2023, 4:51 IST
ಅಕ್ಷರ ಗಾತ್ರ

ತಿರುವನಂತಪುರ: 24 ಗಂಟೆಗಳ ಅವಧಿಯಲ್ಲಿ ಕೇರಳ ರಾಜ್ಯದಲ್ಲಿ ಕೋವಿಡ್ ದೃಢಪಟ್ಟ 265 ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,606ಕ್ಕೆ ಏರಿಕೆಯಾಗಿದೆ.

ಕಳೆದ ಮೂರು ವರ್ಷಗಳಿಂದ ಕೇರಳದಲ್ಲಿ ಕೋವಿಡ್‌ನಿಂದ 72,060 ಮಂದಿ ಮೃತಪಟ್ಟಿದ್ದಾರೆ.

ಗುರುವಾರ ಕೇರಳದಲ್ಲಿ 300 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಮೂವರು ಮೃತಪಟ್ಟಿದ್ದರು.

ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಂಗಳವಾರ ಹೇಳಿದ್ದರು. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳು ಸಮರ್ಪಕವಾಗಿ ಸಜ್ಜುಗೊಂಡಿವೆ ಎಂದೂ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT