ನವದೆಹಲಿ: ನೀತಿ ಆಯೋಗ ಗುರುವಾರ ಬಿಡುಗಡೆ ಮಾಡಿರುವ 2020-21ನೇ ಸಾಲಿನ ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿ) ಭಾರತ ಸೂಚ್ಯಂಕದಲ್ಲಿ ಕೇರಳ ಅಗ್ರ ಶ್ರೇಯಾಂಕವನ್ನು ಕಾಯ್ದುಕೊಂಡಿದ್ದು, ಬಿಹಾರ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಾಮಾಜಿಕ, ಆರ್ಥಿಕ ಹಾಗೂ ಪರಿಸರ ಮಾನದಂಡಗಳಲ್ಲಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಗತಿಯನ್ನು ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿ) ಮೌಲ್ಯಮೌಪನ ಮಾಡುತ್ತದೆ.

75 ಅಂಕಗಳೊಂದಿಗೆ ಕೇರಳ ಅಗ್ರಸ್ಥಾನ ಉಳಿಸಿಕೊಂಡಿದ್ದು, ಹಿಮಾಚಲ ಪ್ರದೇಶ ಹಾಗೂ ತಮಿಳುನಾಡು ತಲಾ 74 ಅಂಕಗಳೊಂದಿಗೆ ಎರಡನೇ ಸ್ಥಾನವನ್ನು ಹಂಚಿಕೊಂಡವು.

ಇದನ್ನೂ ಓದಿ:ಕೋವಿಡ್ ಲಸಿಕೆ: 30 ಕೋಟಿ ಡೋಸ್ಗೆ ಬಯೋಲಾಜಿಕಲ್-ಇ ಕಂಪನಿ ಜತೆಗೆ ಕೇಂದ್ರ ಒಪ್ಪಂದ

ಈ ವರ್ಷದ ಎಸ್‌ಡಿಜಿ ಭಾರತ ಸೂಚ್ಯಂಕದಲ್ಲಿ ಬಿಹಾರ, ಜಾರ್ಖಂಡ್ ಮತ್ತು ಅಸ್ಸಾಂ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದ ರಾಜ್ಯಗಳಾಗಿವೆ.

ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಡ 79 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದು, ದೆಹಲಿ (68) ಎರಡನೇ ಸ್ಥಾನದಲ್ಲಿದೆ.

ದೇಶದ ಒಟ್ಟಾರೆ ಎಸ್‌ಡಿಜಿ ಅಂಕಗಳಲ್ಲಿ 6 ಪಾಯಿಂಟ್‌ಗಳ ವರ್ಧನೆಯುಂಟಾಗಿದ್ದು, 2019ರಲ್ಲಿ 60ರಿಂದ 2020-21ರ ವೇಳೆಗೆ 66ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.