ತಿರುವನಂತಪುರ: ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಲಯಾಳಂ ನಟಿ ರೇವತಿ ಸಂಪತ್ ವಿರುದ್ಧ ಮಲಯಾಳ ಚಲನಚಿತ್ರ ಕಲಾವಿದರ ಸಂಘ (ಅಮ್ಮಾ) ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ದೂರು ದಾಖಲಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಸಿದ್ದಿಕ್ ಅವರು ಡಿಜಿಪಿಗೆ ದೂರು ಸಲ್ಲಿಸಿದ್ದಾರೆ ಎಂದು ಕೇರಳ ಪೊಲೀಸರು ಖಚಿತಪಡಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸಿದ್ದಿಕ್ ಅವರು ಮಲಯಾಳ ಚಲನಚಿತ್ರ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದರು.
ಇತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯಲ್ಲಿ ಪ್ರಸ್ತಾಪಿಸಿರುವ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪಗಳ ಪ್ರಕರಣಗಳ ತನಿಖೆ ನಡೆಸಬೇಕು. ಪೂರ್ಣ ವರದಿಯನ್ನು ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಸಂತ್ರಸ್ತರ ಗುರುತನ್ನು ಬಹಿರಂಗಪಡಿಸದೇ ವರದಿಯು ಹೊರಬರಬೇಕು ಎಂದು ಕಲಾವಿದರ ಸಂಘ ಒತ್ತಾಯಿಸಿದೆ.