ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳ್ಳಲು ಮೂರು ದಿನಗಳು ಉಳಿದಿದ್ದು, 25 ಲಕ್ಷಕ್ಕೂ ಹೆಚ್ಚು ಮತದಾರರ ಗಣತಿ ಇನ್ನೂ ಬಾಕಿ ಇದೆ.

ಇತ್ತೀಚಿನ ಮತದಾರರ ಪಟ್ಟಿ ಪ್ರಕಾರ, ಕೇರಳದಲ್ಲಿ ಒಟ್ಟು ಮತದಾರರ ಸಂಖ್ಯೆ 2,78,50,855 ಇದೆ.

ಸೋಮವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ರತನ್ ಖೇಲ್ಕರ್ ಮಾತನಾಡಿ, ‘ಗರಿಷ್ಠ ಸಂಖ್ಯೆಯ ಮತದಾರರನ್ನು ಪತ್ತೆ ಹಚ್ಚಲು ಬೂತ್ ಮಟ್ಟದ ಅಧಿಕಾರಿಗಳು ರಾಜಕೀಯ ಪಕ್ಷಗಳ ಏಜೆಂಟರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ. ಮೃತ ಮತದಾರರನ್ನು ಮರಣ ನೋಂದಣಿಗಳ ಸಹಾಯದಿಂದ ಪತ್ತೆಹಚ್ಚಲಾಗುತ್ತಿದೆ. 14 ಜಿಲ್ಲೆಗಳ ಪೈಕಿ ಕಾಸರಗೋಡು, ವಯನಾಡ್ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಗಣತಿ ಕಾರ್ಯ ಪೂರ್ಣಗೊಂಡಿದೆ’ ಎಂದು ಹೇಳಿದರು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ವ್ಯತ್ಯಾಸದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಲ್ಲ ನೈಜ ಮತದಾರರನ್ನು ಪತ್ತೆಹಚ್ಚಲು ಇನ್ನೂ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೇಳಿದ್ದಾರೆ.

ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 23ರಂದು ಪ್ರಕಟಿಸಲಾಗುತ್ತದೆ. ಆಕ್ಷೇಪಣೆ ಮತ್ತು ವಿನಂತಿಗಳನ್ನು ಪರಿಗಣಿಸಿದ ಬಳಿಕ, ಅಂತಿಮ ಪಟ್ಟಿಯನ್ನು 2026ರ ಫೆಬ್ರುವರಿ 21ರೊಳಗೆ ಪ್ರಕಟಿಸಲು ನಿರ್ಧರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.