ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಂಗಾಳದ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಗುರುವಾರ ಆಗ್ರಹಿಸಿದ್ದಾರೆ.

ಪಾರ್ಥ ಚಟರ್ಜಿ ಅವರನ್ನು ಸಚಿವ ಸಂಪುಟದಿಂದ ಉಚ್ಚಾಟನೆ ಮಾಡಿ ಕೂಡಲೇ ಪಕ್ಷದಿಂದ ವಜಾಗೊಳಿಸಬೇಕು. ನನ್ನ ಹೇಳಿಕೆ ಸರಿಯಲ್ಲ ಎಂದಾದರೆ ನನ್ನನ್ನು ಪಕ್ಷದ ಎಲ್ಲ ಹುದ್ದೆಗಳಿಂದ ತೆಗೆದುಹಾಕುವ ಹಕ್ಕು ಪಕ್ಷಕ್ಕಿದೆ. ನಾನು ಟಿಎಂಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದು ಪಕ್ಷದ ವಕ್ತಾರ ಕೂಡ ಆಗಿರುವ ಕುನಾಲ್ ಘೋಷ್ ಹೇಳಿದ್ದಾರೆ.

ಓದಿ...ಪಾರ್ಥ ಚಟರ್ಜಿ ನನ್ನ ಮನೆಯನ್ನೇ ಮಿನಿಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ

ಓದಿ:ಅರ್ಪಿತಾ ಮುಖರ್ಜಿ ಮನೆಯಲ್ಲಿ ಅಂದಾಜು ₹50 ಕೋಟಿ ಹಣ, ಕೆ.ಜಿಗಟ್ಟಲೆ ಚಿನ್ನ ವಶ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲೆ ತನಗೆ ಸಂಪೂರ್ಣ ನಂಬಿಕೆಯಿದೆ. ಅವರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ಅಪಾರ್ಟ್ಮೆಂಟ್ನಿಂದ ಆಸ್ತಿ ಹಾಗೂ ವಿದೇಶಿ ವಿನಿಮಯದ ದಾಖಲೆ ಸಹಿತ ಸರಿ ಸುಮಾರು ₹50 ಕೋಟಿ ನಗದು ಮತ್ತು ಕೆ.ಜಿಗಟ್ಟಲೆ ಚಿನ್ನವನ್ನು ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಪಾರ್ಥ ಚಟರ್ಜಿ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಸಿಪಿಐ(ಎಂ) ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.