ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ | ಬೆತ್ತಲೆ ಸೇವೆ ಮಾಡುವಂತೆ ಒತ್ತಾಯ: ಸಂತ್ರಸ್ತೆಯ ಪತಿ ಸೇರಿ ಇಬ್ಬರ ಬಂಧನ

Published : 18 ಸೆಪ್ಟೆಂಬರ್ 2024, 10:42 IST
Last Updated : 18 ಸೆಪ್ಟೆಂಬರ್ 2024, 10:42 IST
ಫಾಲೋ ಮಾಡಿ
Comments

ಕೋಯಿಕ್ಕೋಡ್: ಕೇರಳದಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆ ಸೇವೆ ಮಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ಪತಿ ಸೇರಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ 46 ವರ್ಷದ ಪ್ರಕಾಶ್ ಮತ್ತು ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ನನ್ನ ಗಂಡನ ದೇಹದಲ್ಲಿ ದುಷ್ಟಶಕ್ತಿ ನೆಲೆಸಿರುವುದರಿಂದ ದಾಂಪತ್ಯದಲ್ಲಿ ತೊಂದರೆಯಾಗುತ್ತಿದೆ. ಹಾಗಾಗಿ ಬೆತ್ತಲೆ ಸೇವೆ ಮಾಡುವುದರಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪ್ರಕಾಶ್ ಹೇಳಿದ್ದರು’ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆತ್ತಲೆ ಸೇವೆ ಮಾಡುವಂತೆ ಪ್ರಕಾಶ್ ಮತ್ತು ನನ್ನ ಪತಿ ನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT