ನವದಹಲಿ: ಮೂರು ದಿನಗಳ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನಿನ ಕುರಿತಂತೆ ಚರ್ಚಿಸಲು ಬುಧವಾರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಮ್ಮ ನಿವಾಸದಲ್ಲಿ ಪಕ್ಷದ ಸಂಸದೀಯ ಕಾರ್ಯತಂತ್ರ ಗುಂಪಿನ ಸಭೆ ನಡೆಸಿದರು. ಅಲ್ಲಿ ಕಾಂಗ್ರೆಸ್ನ ಉನ್ನತ ನಾಯಕರು ಮಹಿಳಾ ಮೀಸಲಾತಿ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ವಿಷಯದ ಕುರಿತು ಚರ್ಚಿಸಿದರು.

ಸರ್ಕಾರ ಮಂಗಳವಾರ ಮಹಿಳಾ ಮೀಸಲಾತಿ ಕಾನೂನು ಮತ್ತು ಕ್ಷೇತ್ರ ಪುನರ್ವಿಂಗಡಣೆಗೆ ಸಂಬಂಧಿಸಿದ ಮಸೂದೆಗಳ ಪ್ರತಿಗಳನ್ನು ಸಂಸದರಿಗೆ ಹಂಚಿಕೆ ಮಾಡಿತ್ತು.

ಮಸೂದೆಯ ಹಿಂದಿನ ಉದ್ದೇಶ ಅನುಚಿತವಾಗಿದ್ದರೆ ಮತ್ತು ವಂಚನೆಯ ಉದ್ದೇಶ ಹೊಂದಿದ್ದರೆ, ಸಂಸದೀಯ ಪ್ರಜಾಪ್ರಭುತ್ವಕ್ಕೆ ಆಗುವ ಹಾನಿಯ ಪ್ರಮಾಣವು ಅಗಾಧವಾಗಿರುತ್ತದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂಸತ್ತಿನ ಬಜೆಟ್ ಅಧಿವೇಶನವನ್ನು ವಿಸ್ತರಿಸಲಾಗಿದೆ. ಏಪ್ರಿಲ್ 16 ರಿಂದ 18ರವರೆಗೆ ಸಂಸತ್ನ ವಿಶೇಷ ಮೂರು ದಿನಗಳ ಅಧಿವೇಶನವನ್ನು ಕರೆಯಲಾಗಿದ್ದು, ಈ ಸಮಯದಲ್ಲಿ 2029ಕ್ಕೂ ಮುನ್ನ ಮಹಿಳಾ ಮೀಸಲಾತಿ ಮಸೂದೆ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.

ಇದರ ಜೊತೆಗೆ, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಯೂ ಆಗಲಿದ್ದು, ಲೋಕಸಭಾ ಕ್ಷೇತ್ರಗಳು 543ರಿಂದ 850ಕ್ಕೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿಂದಿನ ಜನಗಣತಿ ಆಧರಿಸಿ 2029ರ ಲೋಕಸಭಾ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.