ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಅತಿಕ್ರಮಣ ಯತ್ನ; ಕೆಸಿಆರ್‌ ಸಂಬಂಧಿ ಬಂಧನ

Published 2 ಏಪ್ರಿಲ್ 2024, 14:01 IST
Last Updated 2 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಸೋದರಳಿಯ ಕೆ.ಕನ್ನಾರಾವ್ ಅವರನ್ನು ಭೂಮಿ ಅತಿಕ್ರಮಣಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

ಸಿಬ್ಬಂದಿಯನ್ನು ಬೆದರಿಸಿ ಎರಡು ಎಕರೆ ಭೂಮಿ ಅತಿಕ್ರಮಿಸಲು ಯತ್ನಿಸಿದ್ದಾರೆ ಎಂದು ರಿಯಲ್ ಎಸ್ಟೇಟ್‌ ಸಂಸ್ಥೆಯ ನಿರ್ದೇಶಕರೊಬ್ಬರು ನೀಡಿದ್ದ ದೂರು ಆಧರಿಸಿ ವಾರದ ಹಿಂದೆ ಪ್ರಕರಣ ದಾಖಲಾಗಿತ್ತು. 

ಕೊಲೆ ಯತ್ನ ಸೇರಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT